ಶಾಸಕ ಸುನೀಲ್ ನಾಯ್ಕಗೆ ಕರೋನಾ ಪಾಸಿಟಿವ್

Source: S.O. News Service | Published on 20th August 2020, 8:37 PM | Coastal News | Don't Miss |

ಭಟ್ಕಳ ಶಾಸಕ ಸುನೀಲ ನಾಯ್ಕ ಇವರಿಗೆ ಕರೊನಾ ವೈರಸ್ ಸೋಂಕು ದೃಡಪಟ್ಟಿದ್ದು ಭಟ್ಕಳ ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರು ಗುರುವಾರ ಮುರ್ಡೇಶ್ವರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ರ್ಯಾಪಿಡ್ ಟೆಸ್ಟ್‍ನಲ್ಲಿ ಪಾಸಿಟಿವ್ ಬಂದಿದೆ. ನಂತರ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೆಂಗಳೂರಿನಿಂದ ಮರಳಿದ್ದರು ಎನ್ನಲಾಗಿದ್ದು ಅವರ ಟ್ರಾವೆಲ್ ಹಿಸ್ಟರಿಯನ್ನು ಪರೀಕ್ಷಿಸಲಾಗುತ್ತಿದೆ.ಈ ಕುರಿತು ಫೆಸ್‍ಬುಕ್‍ನಲ್ಲಿ ಬರೆದುಕೊಂಡ ಅವರು ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಕೊಳ್ಳಿ ಎಂದಿದ್ದಾರೆ. ಈಗಾಗಲೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಒಂದು ವೇಳೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದರೆ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ದೊರಕಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...