ಭಟ್ಕಳ: ವ್ಯಕ್ತಿಗೆ ಹಲ್ಲೆ ದೂರು ದಾಖಲು

Source: sonews | By Staff Correspondent | Published on 29th September 2019, 12:31 AM | Coastal News | Don't Miss |

ಭಟ್ಕಳ: ರಾತ್ರಿ ವೇಳೆ ಶೌಚಕ್ಕೆಂದು ಮನೆಯಿಂದ ಹೊರಬಂದ ವ್ಯಕ್ತಿಯೊಬ್ಬರ ಮೇಲೆ ಎಕಾಏಕಿ ನಾಲ್ಕೈದು ಜನರ ತಂಡವೊಂದು ಹಲ್ಲೆಗೈದು ಪರಾರಿಯಾಗಿರುವ ಘಟನೆ ತಾಲೂಕಿನ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೆದೋಮಿ ಎಂಬಲ್ಲಿ ಶುಕ್ರವಾರ ಮದ್ಯರಾತ್ರಿ ಜರಗಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಮುರುಡೇಶ್ವರದ ಹಿರೇದೋಮಿ ನಿವಾಸಿ ನಾಗರಾಜ ನಾಯ್ಕ ಎಂದು ಗುರುತಿಸಲಾಗಿದೆ. ಹಲ್ಲೆಯಿಂದಾಗಿ ತಲೆ ಹಾಗೂ ಕೈಗೆ ಗಂಭೀರ ಪ್ರಮಾಣದ ಪೆಟ್ಟಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.

ಗೋಕಳ್ಳರ ಕೃತ್ಯ?: ತಡರಾತ್ರಿ ವ್ಯಕ್ತಿಯೊಬ್ಬರ ಮೇಲೆ ಎಕಾಎಕಿ ಹಲ್ಲೆಗೈಯಲು ಕಾರಣಗಳೇನು ಎಂಬುದರ ಕುರಿತಂತೆ ಈಗ ಚರ್ಚೆಯಾಗುತ್ತಿದ್ದು ಈ ಭಾಗದಲ್ಲಿ ಹಲವು ದಿನಗಳಿಂದ ಗೋಕಳ್ಳರು ಸಕ್ರೀಯಗೊಂಡಿದ್ದು ಇದು ಅವರದ್ದೇ ಕೃತ್ಯವಾಗಿರಬಹುದು ಎಂಬ ಶಂಕೆಯು ವ್ಯಕ್ತವಾಗುತ್ತಿದೆ. ಗೋ ಕಳುವು ಮಾಡಲು ಬಂದ ತಂಡದವರು ರಾತ್ರಿ ವ್ಯಕ್ತಿಯನ್ನು ಕಂಡು ಗಬಾರಿಗೊಂಡಿದ್ದು ತಮ್ಮ ಮುಖವಾಡ ಕಳಚಿಬೀಳಬಹುದು ಎಂಬ ಭಯದಿಂದ ಹಲ್ಲೆಗೈಯಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಪೊಲೀಸ್ ತನಿಖೆಯಿಂದಲೇ ಸತ್ಯತೆ ಹೊರಬೀಳಲಿದೆ. 
 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...