ಭಟ್ಕಳ: ಕುರಾನ್ ಕಂಠಪಾಠ ಮಾಡಿದ ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಚೀಫ್ ಖಾಝಿ

Source: sonews | By Staff Correspondent | Published on 20th January 2020, 7:23 PM | Coastal News | Islam | Don't Miss |

ಭಟ್ಕಳ: ಇಲ್ಲಿನ ಖಲಿಫಾ ಮರ್ಕಝಿ ಜಮಾಅತುಲ್ ಮುಸ್ಲಿಮೀನ್ ನ ಚೀಫ್ ಖಾಜಿ ಹಾಗೂ ಜಾಮಿಯಾ ಇಸ್ಲಾಮಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಮೌಲಾನ ಕ್ವಾಜಾ ಮುಈನುದ್ದಿನ್ ಅಕ್ರಮಿ ಮದನಿ, ನದ್ವಿ ತಮ್ಮ 53ನೆ ವಯಸ್ಸಿನಲ್ಲಿಯೂ ಸಂಪೂರ್ಣ ಕುರ್‍ಆನ್ ಗ್ರಂಥವನ್ನು ಕಂಠಪಾಠ ಮಾಡಿದ್ದು ಖಲಿಫಾ ಜಾಮಿಯಾ ಮಸೀದಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. 

ಕಠಿಣ ಪರಿಶ್ರಮದ ಮೂಲಕ ಕೇವಲ 8 ತಿಂಗಳಲ್ಲಿ ಬೃಹತ್ ಗ್ರಂಥವನ್ನು ಕಂಠಸ್ಥಗೊಳಿಸಿದ ಇವರು ಆಲಿಮ್ ಪದವಿಯೊಂದಿಗೆ ‘ಹಾಫಿಝ್’ ಪದವಿಯನ್ನೂ ಪಡೆದುಕೊಂಡತಾಗಿದೆ. 

ಈ ಸಂದರ್ಭದಲ್ಲಿ ನದ್ವತುಲ್ ಉಲೇಮಾದ ಲಖ್ನೋ ದ ವಿದ್ವಾಂಸ ಮೌಲಾನ ಬಿಲಾಲ್ ಹಸನಿ ನದ್ವಿ, ಜಮಾಅತುಲ್ ಮುಸ್ಲಿಮೀನ್ ಮುಖ್ಯ ಖಾಝಿ ಮೌಲಾನ ಇಕ್ಬಾಲ್ ಮುಲ್ಲಾ ನದ್ವಿ, ಸಾದಾ ಮೀರಾ ಸೇರಿದಂತೆ ಪ್ರಮುಖ ವಿದ್ವಾಂಸರು ಉಪಸ್ಥಿತರಿದ್ದರು. 
 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...

ಜಿಲ್ಲಾಮಟ್ಟದ ಸೀರತ್ ಪ್ರಬಂಧ ಸ್ಪರ್ಧೆ ಫಲಿತಾಂಶ; ಹೊನ್ನಾವರದ ಜಿ.ಎಸ್.ಹೆಗಡೆ ಪ್ರಥಮ

ಭಟ್ಕಳ: ‘ಪ್ರವಾದಿ ಮುಹಮ್ಮದ್(ಸ) ಎಲ್ಲರಿಗಾಗಿ’ ಸೀರತ್ ಅಭಿಯಾನದ ಅಂಗವಾಗಿ ‘ಪ್ರವಾದಿ ಮುಹಮ್ಮದ್(ಸ) ಮತ್ತು ಸಮಾನತೆ’ ಎಂಬ ವಿಷಯದಲ್ಲಿ ...