ಸಹಸ್ರಾರು ಭಕ್ತರ ಉದ್ಘೋಷದೊಂದಿಗೆ ಸಂಪನ್ನಗೊಂಡ ಭಟ್ಕಳದ ಚನ್ನಪಟ್ಟಣ ಹನುಮಂತ ದೇವರ ಜಾತ್ರೆ.

Source: SO News | By Laxmi Tanaya | Published on 26th February 2021, 11:00 PM | Coastal News | Don't Miss |

ಭಟ್ಕಳ : ಚನ್ನಪಟ್ಟಣದ ಶ್ರೀ ಹನುಮಂತ ದೇವರ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು.

ಕಳೆ ವರ್ಷ ಕೋವಿಡ್ 19 ಅಬ್ಬರದಿಂದ ಮುಂದೂಡಿದ್ದ ಜಾತ್ರೆ ಈ ಬಾರೀ ರಥಸಪ್ತಮಿಯಂದು ಆರಂಭಗೊಂಡಿತ್ತು. ಶುಕ್ರವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ವಿಜ್ರಂಭಣೆಯಿಂದ ನಡೆಯಿತು.

ರಥೋತ್ಸವ ಆರಂಭಕ್ಕೂ ಮುನ್ನ ಸಂಪ್ರದಾಯಂತೆ ಚಿರ್ಕಿನ್ ಶಾಬಾಂದ್ರಿ ಕುಟುಂಬದವರಿಗೆ ವೀಳ್ಯ ನೀಡುವ ಮೂಲಕ ಜಾತ್ರೆಗೆ ಆಹ್ವಾನಿಸಲಾಯಿತು. ಸಂಜೆ ದೇವಾಲಯದ ಎದುರು ದೇವರಿಗೆ ಈಡುಗಾಯಿ ಒಡೆಯುವ ಮೂಲಕ ಭಕ್ತರು ರಥವನ್ನ ಎಳೆದು ಪುನೀತರಾದರು.

ಹುಲಿ ವೇಷ, ಭಜನೆ, ಡೊಳ್ಳು ವಾದ್ಯ ಜಾತ್ರೆಯಲ್ಲಿ ಗಮನ ಸೆಳೆಯಿತು. ಸುಮಾರು 20ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...