ಅತಿಕ್ರಮಿತ ಸರ್ಕಾರಿ ಜಮೀನು ತೆರವು ಕಾರ್ಯಾಚರಣೆ

Source: sonews | By Staff Correspondent | Published on 21st September 2018, 6:22 PM | Coastal News | Don't Miss |

ಭಟ್ಕಳ: ತಹಸಿಲ್ದಾರರ ಆದೇಶದ ಮೇರೆಗೆ  ತಾಲೂಕಿನ ಹಡೀನ್ ಗ್ರಾಮದಲ್ಲಿ ಅತಿಕ್ರಮಿತ ಸರ್ಕಾರಿ ಜಮೀನು ಸ.ನಂ 95 ರನ್ನು ಕಂದಾಯ ಅಧಿಕಾರಿಗಳು ಖುಲ್ಲಾ ಪಡಿಸಿದ ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರಗಿದೆ.

ಹಡೀನ್ ಗ್ರಾಮದ ನಾಗೇಶ್ ಲಚ್ಮಯ್ಯ ನಾಯ್ಕ ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿಕೊಂಡಿದ್ದು  ಕಳೆದ 4-5 ವರ್ಷಗಳಿಂದ ಅಲ್ಲಿ ತೆಂಗಿನ ಮರ, ಬಾಳೆಗಿಡ ನೆಟ್ಟು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಕಂದಾಯ ಅಧಿಕಾರಿಗಳು ಜಮೀನು ಖುಲ್ಲಾಗೊಳಿಸುವಂತೆ ಹಲವುಬಾರಿ ನೋಟೀಸ್ ನೀಡಿದ್ದಾಗ್ಯೂ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಮತ್ತಷ್ಟು ಜಾಗವನ್ನು ಅತಿಕ್ರಮಿಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ತಹಸಿಲ್ದಾರ ವಿ.ಎನ್.ಬಾಡ್ಕರ ಆದೇಶದಂತೆ ಕಂದಾಯ ಅಧಿಕಾರಿಗಳು ಪೊಲೀಸ್ ಬಂದೋಬಸ್ತಿನಲ್ಲಿ ಸರ್ಕಾರಿ ಜಾಗವನ್ನು ತೆರವುಗೊಳಿಸಿದು. 

ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಮನೆಯ ಮಾಲಿಕ ರಸ್ತೆಯಲ್ಲಿ ಮಲಗಿಕೊಂಡು ಪ್ರತಿಭಟನೆ ನಡೆಸಿದ್ದು ಪೊಲೀಸರು ಮಧ್ಯಪ್ರವೇಶಿಸಿ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...