ಚಿತ್ರಾಪುರ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Source: S.O. News Service | By MV Bhatkal | Published on 10th October 2018, 8:20 PM | Coastal News | Don't Miss |

ಭಟ್ಕಳ: ಹೊನ್ನಾವರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ತಾಲೂಕಿನ ಶಿರಾಲಿ ಚಿತ್ರಾಪುರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಲದೀಪ ಕುಮಾರ ಜಗತ್ಪಾಲ ಈತನು ಗುಂಡು ಎಸೆತ, ಚಕ್ರ ಎಸೆತ, ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ವೀರಾಗ್ರಣಿ ಪ್ರಶಸ್ತಿಯೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
 ಇದೇ ಶಾಲೆಯ ಮಂದಾರ ವೆಂಕಟ್ರಮಣ ನಾಯ್ಕ 400ಮೀ ಹಾಗೂ 600ಮೀ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದಾಳೆ. ಇನ್ನುಳಿದಂತೆ ಹರ್ಡಲ್ಸ್‍ನಲ್ಲಿ ಪುನೀತ ನಾರಾಯಣ ನಾಯ್ಕ ತೃತೀಯ ಸ್ಥಾನ ಪಡೆದರೆ, 4*100ಮೀ ರೀಲೆ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕ ರಾಮದಾಸ ಆಗೇರ ಇವರನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...