ಭಟ್ಕಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 2492 ವಿದ್ಯಾರ್ಥಿಗಳು ಹಾಜರು

Source: S O News service | By S O News | Published on 20th July 2021, 1:20 PM | Coastal News |

ಭಟ್ಕಳ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭವಾಗಿದ್ದು, ತಾಲೂಕಿನ 12 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟೂ 2492 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಮೊದಲ ದಿನದ ಪರೀಕ್ಷೆಗೆ ಒಟ್ಟೂ 8 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 

ಸೋಮವಾರ ಪರೀಕ್ಷೆ ಬರೆಯ ಬೇಕಾಗಿದ್ದ 1352 ಗಂಡು ಮಕ್ಕಳ ಪೈಕಿ 1345 ವಿದ್ಯಾರ್ಥಿಗಳು ಹಾಜರಾಗಿದ್ದರೆ, 1148 ವಿದ್ಯಾರ್ಥಿನಿಯರ ಪೈಕಿ 1147 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಸೆನಿಟೈಸೇಶನ್ ಮಾಡಿಸಿದ ನಂತರ ಪರೀಕ್ಷಾ ಕೇಂದ್ರಗಳ ಒಳಕ್ಕೆ ಬಿಡಲಾಯಿತು. ಪರೀಕ್ಷಾ ಕೇಂದ್ರದ ಸುತ್ತ ಪೊಲೀಸರನ್ನು ನಿಯೋಜಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜು.19ರಂದು ಗಣಿತ, ವಿಜ್ಞಾನ, ಸಮಾಜ ವಿಷಯದ ಮೇಲೆ ಪರೀಕ್ಷೆ ನಡೆದಿದ್ದು, ಜು.22ರಂದು ಭಾಷಾ ವಿಷಯಗಳ ಮೇಲೆ ಪರೀಕ್ಷೆ ನಡೆಯಲಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...