ಭಟ್ಕಳ: ಲಂಡನ್ ನ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಟ್ಕಳದ ಅಮೀನ್ ಬೆಳ್ಕೆ

Source: S O News | By I.G. Bhatkali | Published on 28th November 2022, 6:07 PM | Coastal News |

ಭಟ್ಕಳ: ಭಟ್ಕಳದ ವಿದ್ಯಾರ್ಥಿ ಮುಹಮ್ಮದ್ ಅಮೀನ್ ಬೆಳಕೆ ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಮಾಸ್ಟರ್ ಆಫ್ ಸೈನ್ಸ್ (ಎಂಎಸ್ಸಿ) ನಲ್ಲಿ ಉನ್ನತ ಸ್ಥಾನದೊಂದಿಗೆ ಯಶಸ್ವಿಯಾಗಿದ್ದಾರೆ ಮತ್ತು ಅವರ ಅತ್ಯುತ್ತಮ ಸಾಧನೆಗಾಗಿ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯವು ಪದವಿ ಪ್ರಮಾಣ ಪತ್ರದೊಂದಿಗೆ ಚಿನ್ನದ ಪದಕ ನೀಡಿ ಗೌರವಿಸಿದೆ. ಅವರು ಈ ವಿಶ್ವವಿದ್ಯಾನಿಲಯದಲ್ಲಿ ಥಿನ್ ಫಿಲ್ಮ್ ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದರು.

ಶಿರೂರಿನ ಗ್ರೀನ್ ವ್ಯಾಲಿ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಭಟ್ಕಳದ ಅಂಜುಮನ್ ಕಾಲೇಜಿನಲ್ಲಿ ಪಿಯುಸಿ ಹಾಗೂ ಮಂಗಳೂರಿನ ಶ್ರೀನಿವಾಸ್ ಕಾಲೇಜ್ ಆಫ್ ಇಂಜಿನೀಯರಿAಗ್ ನಲ್ಲಿ ನ್ಯಾನೋಚಿಪ್ ಟೆಕ್ನೊಲೋಜಿಯಲ್ಲಿ ಪದವಿ ಪಡೆದು ಉನ್ನತ ವ್ಯಾಸಂಗಕ್ಕಾಗಿ ಲಂಡನ್ ತೆರಳಿ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದಲ್ಲಿ ‘ಥಿನ್ ಫಿಲ್ಮ್ ಟೆಕ್ನಾಲಜಿ’ ಯಲ್ಲಿ ಮಾಸ್ಟರ್ ಆಫ್ ಸೈನ್ಸ್ (ಎಂಎಸ್ಸಿ) ಪದವಿ ಪಡೆದುಕೊಂಡಿದ್ದಾರೆ. 

ಎಂಎಸ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದು ಇದಕ್ಕಾಗಿ ಅಲ್ಲಿನ ವಿಶ್ವವಿದ್ಯಾಲಯವು ಘಟಿಕೋತ್ಸವ ದಿನದಂದು ಪದವಿಯೊಂದಿಗೆ ಚಿನ್ನದ ಪದಕವನ್ನು ನೀಡಿ ಪುರಸ್ಕರಿಸಿದೆ. 

ಭಟ್ಕಳದ ಡೊಂಗರಪಳ್ಳಿ ನಿವಾಸಿ ಯೂನಸ್ ಬೆಳ್ಕೆ ಯವರ ಪುತ್ರರಾಗಿರುವ ಮುಹಮ್ಮದ್ ಅಮೀನ್ ಲಂಡನ್ ತಲುಪಿ ಉನ್ನತ ಶಿಕ್ಷಣದಲ್ಲಿ ಗಣನೀಯ ಸಾಧನೆ ಮಾಡಿ ಇಡೀ ರಾಷ್ಟ್ರ ಮತ್ತು ರಾಷ್ಟ್ರದ ಹೆಸರನ್ನು ಬೆಳಗಿಸುತ್ತಿರುವುದಕ್ಕೆ ಭಟ್ಕಳದ ವಿವಿಧ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಯ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. 

ಶಿರೂರಿನ ಗ್ರೀನ್ ವ್ಯಾಲಿ ಇಂಟರ್ ನ್ಯಾಷನಲ್ ಸ್ಕೂಲ್ ನ ಉಪಾಧ್ಯಕ್ಷ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಮೊಹಮ್ಮದ್ ಮೀರಾನ್ ಮನೆಗಾರ್, ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಮುಝಮಿಲ್ ಕಾಜಿಯಾ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಇಸ್ಮಾಯಿಲ್, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಅತೀಕುರ್ ರೆಹಮಾನ್ ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...