ಎ.ಜೆ.ಅಕಾಡೆಮಿ ಹಾಗೂ ನ್ಯೂಶಮ್ಸ್ ಸ್ಕೂಲ್ ವತಿಯಿಂದ ಭಟ್ಕಳ ತಾಲೂಕು ಮಟ್ಟದ ವಿಜ್ಞಾನ ಮತ್ತು ಸಂಶೋಧನೆ ಕುರಿತ ಸ್ಪರ್ಧೆ

Source: sonews | By Staff Correspondent | Published on 17th July 2019, 6:49 PM | Coastal News | Technology | Don't Miss |

ಭಟ್ಕಳ: ಭಟ್ಕಳದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ತರಬಿಯತ್ ಎಜ್ಯುಕೇಶನ್ ಸೂಸೈಟಿ(ಶಮ್ಸ್ ಶಾಲೆ) ಹಾಗೂ ಎ.ಜೆ.ಅಕಾಡೆಮಿ ಸಂಶೋಧನೆ ಮತ್ತು ಅಭಿವೃದ್ದಿಯ ಸಹಯೋಗದೊಂದಿಗೆ ಡಿ.15,2019 ರಂದು ರವಿವಾರ ಭಟ್ಕಳ, ಮುರುಡೇಶ್ವರ, ಮಂಕಿ ಮತ್ತು ಶಿರೂರಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮತ್ತು ಸಂಶೋಧನೆ ಕುರಿತಂತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಎ.ಜೆ.ಅಕಾಡೆಮಿಯ ನಿರ್ದೇಶಕ ಮುಹಮ್ಮದ್ ಅಬ್ದುಲ್ಲಾ ಜಾವೀದ್, ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್ ಹಾಗು ಉಪಾಧ್ಯಕ್ಷ ನಝೀರ್ ಆಹ್ಮದ್ ಖಾಝಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತಂತೆ ನ್ಯೂಶಮ್ಸ್ ಸ್ಕೂಲ್ ನಲ್ಲಿ ವಿಜ್ಞಾನ ಮತ್ತು ಸಂಶೋಧನೆ ಯ ಮಹತ್ವ ಮತ್ತು ಶಿಕ್ಷಕ ಹಾಗೂ ಆಡಳಿತ ಮಂಡಳಿಗಳ ಜವಾಬ್ದಾರಿಗಳು ಕುರಿತಂತೆ ನಡೆದ ಸಭೆಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸ್ಪರ್ಧೆಗಳಲ್ಲಿ ನಾಲ್ಕನೇ ತರಗತಿಯಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿ/ವಿದ್ಯಾರ್ಥಿನೀಯರು ಭಾಗವಹಿಸಬಹುದಾಗಿದ್ದು ವಿಜ್ಞಾನ ವಿಷಯದ ವಿವಿಧ ಭಾಗಗಳಾಗಿರುವ ಜೀವವಿಜ್ಞಾನ, ಭೌತವಿಜ್ಞಾನ, ಪರಿಸರ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಸಂಬಂಧಿಸಿದಂತೆ ಸಂಶೋಧನೆಗಳನ್ನು ಮಂಡಿಸಲಿದ್ದಾರೆ. ಪ್ರತಿ ವಿಭಾಗದಲ್ಲಿ ಉತ್ತಮ ಸಂಶೋಧನೆ ಮಂಡಿಸುವವರಿಗೆ ಪುರಸ್ಕರಿಸಲಾಗುವುದು. ಅಲ್ಲದೆ, ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ, ಸಹಕರಿಸಿದ ಶಿಕ್ಷಕರಿಗೆ ಹಾಗೂ ಭಾಗವಹಿಸಿದ ಶಾಲೆಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಈ ವಿಜ್ಞಾನ ಮೇಳ(ಸೈನ್ಸ್ ಫೇರ್)ದಲ್ಲಿ  ಮಂಡಿಸಿದ ಅತ್ಯುತ್ತಮ ಸಂಶೋಧನಾ ಯೋಜನೆಗೆ (science research project) ರಾಷ್ಟ್ರೀಯ ಮಟ್ಟದಲ್ಲಿ ಆಯೋಜನೆಗೊಳ್ಳುವ ನ್ಯಾಶನಲ್ ಸೈನ್ಸ್ ಫೇರ್ (National Science Fair)ನಲ್ಲಿ ಪ್ರದರ್ಶಿಸುವ ಅವಕಾಶ ನೀಡಲಾಗುವುದು. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಎಂ.ಆರ್.ಮಾನ್ವಿ (9886455416) ಯವರನ್ನು ಸಂಪರ್ಕಿಸಬಹುದಾಗಿದೆ.

ಈ ಕುರಿತು ಮಾಹಿತಿಗಾಗಿ ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಹಾಗೂ ಪರಿಸರ ವಿಜ್ಞಾನ ವಿಷಯ ಶಿಕ್ಷಕರ ಓರಿಯಂಟೇಶನ್ ಕ್ಯಾಂಪನ್ನು ಅ.31 ರಂದು ಬೆಳಿಗ್ಗೆ 10.00ಗಂಟೆಯಿಂದ 1:00ಗಂಟೆ ವರೆಗೆ ಜಾಮಿಯಾಬಾದ್ ರಸ್ತೆಯಲ್ಲಿರುವ ನ್ಯೂ ಶಮ್ಸ್ ಸ್ಕೂಲ್ಸಭಾಂಗಣದಲ್ಲಿ ಆಯೋಜಿಸಿದ್ದು ಆಡಳಿತ ಮಂಡಳಿಯವರು, ಮುಖ್ಯಾಧ್ಯಾಪಕರು ತಮ್ಮ ತಮ್ಮ ಶಾಲೆಯ ಕನಿಷ್ಠ ಮೂವರು ಶಿಕ್ಷಕರನ್ನು ನಿಯೋಜಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ಕೋರಿದ್ದಾರೆ.

 

Read These Next

ಕಾರವಾರ: ವಿಪತ್ತು ಎದುರಿಸಲು ಯೋಜನೆ ಸಿದ್ದಪಡಿಸಿಕೊಂಡು, ತ್ವರಿತವಾಗಿ ಸ್ಪಂದಿಸಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

ಜಿಲ್ಲೆಯ ಕೈಗಾ ಅಣು ಸ್ಥಾವರ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ ಯಾವುದೇ ಪ್ರದೇಶದಲ್ಲಿ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ, ...

ಹೊಸದಿಲ್ಲಿ: ಧೂಳು ತಿನ್ನುತ್ತಿರುವ5,500ಕ್ಕೂ ಅಧಿಕ ವೆಂಟಿಲೇಟರ್‌ಗಳು ಉ.ಪ್ರ., ಗುಜರಾತ್, ಕರ್ನಾಟಕ ಮುಂಚೂಣಿಯಲ್ಲಿ

ಕೊರೋನ ಎರಡನೇ ಅಲೆಯಲ್ಲಿ ವೆಂಟಿಲೇಟರ್‌ಗಳ ಕೊರತೆಯಿಂದಾಗಿ ಹಲವಾರು ರೋಗಿಗಳು ಸಾವನ್ನಪ್ಪಿದ್ದರೆ, ವಿವಿಧ ರಾಜ್ಯಗಳಲ್ಲಿ ಈ ಜೀವರಕ್ಷಕ ...

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ...