ಭಟ್ಕಳದಲ್ಲಿ ಸ್ವಚ್ಛತಾ ಹಿ ಸೇವಾ ಅಂಗವಾಗಿ ಪ್ಲಾಸ್ಟಿಕ್ ಶವಯಾತ್ರೆ

Source: sonews | By Staff Correspondent | Published on 11th October 2019, 5:34 PM | Coastal News | Don't Miss |

ಭಟ್ಕಳ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್,  ಪುರಸಭೆ ಭಟ್ಕಳ, ಪಟ್ಟಣ ಪಂಚಾಯಿತಿ ಜಾಲಿ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಸ್ವಚ್ಛತಾ ಹಿ ಸೇವಾ ಪ್ಲಾಸ್ಟಿಕ್ ನಿಷೇಧ ಜಾಥಾ ಹಾಗೂ ಪ್ಲಾಸ್ಟಿಕ್ ಶವಯಾತ್ರೆ ಕಾರ್ಯಕ್ರಮಕ್ಕೆ ಸಹಾಯಕ ಆಯುಕ್ತ ಸಾಜಿದ್ ಆಹ್ಮದ್ ಮುಲ್ಲಾ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. 

ಪುರಸಭೆ ಆವರಣದಿಂದ ಆರಂಭವಾದ ಮೆರವಣಿಗೆಯು ಮಾರುಕಟ್ಟೆ ಹೂವಿನ ಚೌಕ ಚೆನ್ನಪಟ್ಟಣ ಹನುಮಂತ ದೇವಸ್ಥಾನ ಪುನಃ ಮಾರುಕಟ್ಟೆ ಮಾರ್ಗವಾಗಿ ಆನಂದಾಶ್ರಮ ಕಾನ್ವೆಂಟ್ ಮೈದಾನದಲ್ಲಿ ಸಮಾಪ್ತಿಗೊಂಡಿತು.  

ತಹಸೀಲ್ದಾರ್ ವಿ.ಪಿ.ಕೊಟ್ರಳ್ಳಿ ಪುರಸಭಾ ಸದಸ್ಯ ರವೂಫ್ ನಾಯ್ತೆ ಮುಖ್ಯಾಧಿಕಾರಿ ದೇವರಾಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಲಕ್ಷ್ಮೀ ನಾರಾಯಣ ಸ್ವಾಮಿ ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ವೇಣುಗೋಪಾಲ ಶಾಸ್ತ್ರಿ ಹೆಸ್ಕಾಂ ಸಹಾಯಕ ಅಭಿಯಂತರ ಮಂಜುನಾಥ್ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸೋಜಿಯಾ ಸುಮನ್ ಮೊದಲಾದವರು ಉಪಸ್ಥಿತರಿದ್ದರು.

ಇದಕ್ಕೂ ಪೂರ್ವದಲ್ಲಿ ಪಿಯು ಕಾಲೇಜು ವಿದ್ಯಾರ್ಥಿಗಳು ಪ್ಲಾಸ್ಟಿಕ್ ನಿಷೇಧ ಕುರಿತ ಪ್ರದರ್ಶಿಸಿದ ಬೀದಿ ನಾಟಕ ಜನಮನ ಗೆಲ್ಲುವಲ್ಲಿ ಯಶಸ್ವಿಯಾಯಿತು. 

ಭಟ್ಕಳ ಸರಕಾರಿ ಕಾಲೇಜು ಅಂಜುಮನ್ ಕಾಲೇಜು ಹಾಗೂ ಶ್ರೀಗುರು ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...