ಭಟ್ಕಳ ಪುರಸಭೆಯಲ್ಲಿ ಮತ್ತೊಮ್ಮೆ ತಂಝೀಮ್ ಬೆಂಬಲಿತ ಆಡಳಿತ

Source: sonews | By Staff Correspondent | Published on 31st May 2019, 7:57 PM | Coastal News |

•    19ವಾರ್ಡುಗಳಲ್ಲಿ ತಂಝೀಮ್ ಬೆಂಬಲಿತರಿಗೆ ಜಯ
•    1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡ ಬಿಜೆಪಿ

ಭಟ್ಕಳ: ಮೇ 29ರಂದು ನಡೆದ ಭಟ್ಕಳ ಪುರಸಭೆಯ ಚುನಾವಣಾ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು ಇಲ್ಲಿನ ರಾಜಕೀಯ, ಸಾಮಾಜಿಕ ಸಂಘಟನೆಯಾಗಿರುವ ತಂಝೀಮ್ ಬೆಂಬಲಿತ 19 ಅಭ್ಯರ್ಥಿಗಳು ( ಇದರಲ್ಲಿ 4ಕಾಂಗ್ರೇಸ್ ಅಭ್ಯರ್ಥಿಗಳು ಸೇರಿದ್ದಾರೆ) ಜಯಗಳಿಸುವುದರೊಂದಿಗೆ ಮತ್ತೊಮ್ಮೆ ಪುರಸಭೆಯ ಅಧಿಕಾರ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ.

23 ವಾರ್ಡುಗಳನ್ನು ಹೊಂದಿರುವ ಭಟ್ಕಳ ಪುರಸಭೆಗೆ ತಂಝೀಮ್ ನ 12 ಅಭ್ಯರ್ಥಿಗಳು ಅವಿರೋಧ ಆಯ್ಕೆಗೊಂಡಿದ್ದು ಉಳಿದ 11 ವಾರ್ಡುಗಳಿಗೆ ಮೇ 29 ರಂದು ಚುನಾವಣೆ ನಡೆದಿತ್ತು. 

ಇಲ್ಲಿನ ಬಂದರ್ ರಸ್ತೆಯಲ್ಲಿರುವ ನ್ಯೂ ಇಂಗ್ಲಿಷ್ ಪ್ರೌಢಶಾಲೆಯಲ್ಲಿ ಮತ ಎಣಿಕೆ ಕಾರ್ಯ ಶುಕ್ರವಾರ ಬೆಳಿಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು ಅರ್ಧ ಗಂಟೆಯ ಬಳಿಕ ಎಲ್ಲ 11 ವಾರ್ಡುಗಳ ಫಲಿತಾಂಶ ಪ್ರಕಟಗೊಂಡಿತು. ಇದರಲ್ಲಿ ಒಂದು ಬಿಜೆಪಿ, ಒಂದು ಕಾಗ್ರೇಸ್ ಹಾಗೂ 9 ಪಕ್ಷೇತರ ಅಭ್ಯರ್ಥಿಗಳು ಜಯಸಾಧಿಸಿದ್ದಾರೆ.

ಗೆದ್ದವರಲ್ಲಿ ಪ್ರಮುಖರು: ಪುರಸಭೆ ಮಾಜಿ ಅಧ್ಯಕ್ಷ  ಪರ್ವೇಝ್ ಕಾಸಿಮಜಿ, ತಂಝೀಮ್ ಮಾಜಿ ಪ್ರ.ಕಾ. ಮುಹಿದ್ದೀನ್ ಅಲ್ತಾಫ್ ಖರೂರಿ, ಕೃಷ್ಣಾನಂದಾ ಪೈ, ಫಯಾಝ್ ಮುಲ್ಲಾ ಸೇರಿದ್ದಾರೆ. 

ವಾರ್ಡುವಾರು ಮಾಹಿತಿ ಇಲ್ಲಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...