ಭಟ್ಕಳ: ಪಿ‌ಎಸ್‌ಐ ರೇವತಿ ಅಮಾನತ್ತು; ದೂರು ದಾಖಲಿಸಲು ಮೀನಮೇಷ ಎಣಿಸಿದ್ದಕ್ಕೆ ತೆತ್ತ ಬೆಲೆ

Source: S O News service | By Staff Correspondent | Published on 29th August 2016, 1:18 AM | Coastal News | State News | Don't Miss |

ಭಟ್ಕಳ: ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕರು ನೀಡಿದ ದೂರನ್ನು ದಾಖಲಿಸಿಕೊಳ್ಳಲು ಮೀನಾಮೇಷ ಎಣಿಸಿದಕ್ಕೆ ಅಮಾನತ್ತುಗೊಳ್ಳುವ ಶಿಕ್ಷೆಯನ್ನು ಅನುಭವಿಸಬೇಕಾಗಿ ಬಂದಿದ್ದು ಇದು ಇತರ ಅಧಿಕರಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. 

ಭಟ್ಕಳದ ಮೊಹಸಿನ್ ಎನ್ನುವವರಿಗೆ ಕೊಲೆ ಬೆದರಿಕೆ ಹಾಗೂ ಹಣದ ಬೇಡಿಕೆಯಿಟ್ಟವರ ವಿರುದ್ಧ ಪ್ರಕರಣದಾಖಲಿಸಿಕೊಳ್ಳುವಂತೆ ನಗರ ಠಾಣೆ ಪಿ‌ಎಸ್.ಐ ರೇವತಿಗೆ ದೂರನ್ನು ನೀಡಲು ಹೋದಾಗ ಅವರು ಪ್ರಕರಣ ದಾಖಲಿಸಿಕೊಳ್ಳಲು ಮೀನಾಮೇಷ ಎಣಿಸಿದ್ದರು ಎನ್ನಲಗಿದೆ. ಈ ಪ್ರಕರಣ ಐಜಿ ಮತ್ತು ಡಿಜಿಯವರ ಬಳಿ ಹೋಗಿ ನಂತರ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕರಿ ವಂಶಿಕೃಷ್ಣರವ ಮೂಲಕ ಭಟ್ಕಳದ ಎ.ಎಸ್.ಪಿಯವರಿಗೆ ಅದೇಶ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನವು ಆಗಿತ್ತು. 

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ರೇವತಿಯವರಿಗೆ ಅಮಾನತ್ತು ಅದೇಶ ನೀಡಿದೆ. ವಿಷಯವನ್ನು ಮೊದಲೆ ಅರಿತುಕೊಂಡ ರೇವತಿಯವರು ಅಮಾನತ್ತು ಆದೇಶ ತೆಗೆದುಕೊಳ್ಳದೆ ತಾನೆ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸುವುದಾಗಿ ರಾಜಿನಾಮೆ ಪತ್ರ ನೀಡಿದ್ದಾಗಿ ತಿಳಿದುಬಂದಿದೆ. ಮಲಾಧಿಕಾರಿಗಳು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ರಾಜಿನಾಮೆ ಪತ್ರದಲ್ಲಿ ಆರೋಪಿಸಲಾಗಿದೆ. ಈ ಪ್ರಕರಣ ಯಾವ ಮಟ್ಟಕ್ಕೆ ಹೋಗುತ್ತೋ ಕಾದು ನೋಡಬೇಕಾಗಿದೆ. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...