ರಂಗಿಕಟ್ಟೆಯಲ್ಲಿ ವಾಹನ ಅಪಘಾತ : ಸವಾರ ಗಂಭೀರ

Source: S.O. News Service | By MV Bhatkal | Published on 29th November 2017, 9:38 PM | Coastal News | Don't Miss |

ಭಟ್ಕಳ: ಚಲಿಸುತ್ತಿದ್ದ ದ್ವಿಚಕ್ರ ವಾಹನವೊಂದರ ಮೇಲೆ ಹಿಂದಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನವು ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ರಂಗಿಕಟ್ಟೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
 ಗಾಯಗೊಂಡವರನ್ನು ತಾಲೂಕಿನ ಪುರಸಭಾ ವ್ಯಾಪ್ತಿಯ ಇಸ್ಮೈಲ್ (32) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ಸಾಗಿಸಲಾಗಿದೆ. ಪೊಲೀಸರು ಎರಡೂ ವಾಹನಗಳನ್ನು ಜಫ್ತುಪಡಿಸಿಕೊಂಡಿದ್ದಾರೆ. ಮಂಗಳವಾರ ಸಂಜೆಯವರೆಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರಲಿಲ್ಲ. 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...