ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತೆ ನೂರ್ ಜಹಾಂ ರಿಗೆ ಸನ್ಮಾನ

Source: sonews | By Staff Correspondent | Published on 7th October 2017, 10:40 PM | Coastal News | State News | Don't Miss |

ಭಟ್ಕಳ: ೨೦೧೭ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಬಾಜನರಾದ ಹೆಬಳೆ ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ತೆಂಗಿನ ಗುಂಡಿ ಇದರ ಮುಖ್ಯಾಧ್ಯಾಪಕಿ ನೂರ್ ಜಹಾಂ ಶೇಖ್‌ರಿಗೆ ವಿಸನ್ ಇಂಡಿಯಾ ಮಿಷನ್ ಫೌಂಡೇಶನ್ ನಿಂದ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು. 
ಗೌರವ ಸ್ವೀಕರಿಸಿ ಮಾತನಾಡಿದ ನೂರ್ ಜಹಾಂ ತಮ್ಮ ಸೇವಾದಿನಗಳನ್ನು ಸ್ಮರಿಸಿ ಮಕ್ಕಳ ತರಬೇತಿಗಾಗಿ ತಮಗೆ ಸಿಕ್ಕ ಅವಕಾಶವನ್ನು ಸದೂಪಯೋಗ ಪಡಿಸಿಕೊಂಡಿದ್ದು ಇದಕ್ಕಾಗಿ ಸೃಷ್ಟಿಕರ್ತನಿಗೆ ಕೃತಜ್ಞತೆ ಸಲ್ಲಿಸಿದರು. 
ಫೌಂಡಶನ್ ಅಧ್ಯಕ್ಷ ಮುಹಮ್ಮದ್ ಫಾರೂಖ್ ಶೇಖ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಡಾ.ನಸೀಮ್ ಖಾನ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಶೌಕತ್ ಕತೀಬ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ನಝೀರ್ ಆಹ್ಮದ್ ಶೇಖ್ ಧನ್ಯವಾದ ಅರ್ಪಿಸಿದರು. 
ಈ ಸಂದರ್ಭದಲ್ಲಿ ಅಂಜುಮನ್ ಬಾಲಕೀಯರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಹಸೀನಾ ಬಾನು, ಜೆ.ಸಿ.ಐ ಅಧ್ಯಕ್ಷ ನಾಗರಾಜ್ ಶೇಟ್, ವಿಸನ್ ಮಿಷನ್ ಫೌಂಡೇಶನ್  ಪ್ರಧಾನ ಕಾರ್ಯದರ್ಶಿ ಅಮ್ಜದ್ ಅಲಿ ಶೇಖ್, ಮತ್ತಿತರರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...