ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯದ ಫಝ್ಲುರ್ರಹ್ಮಾನ್ ರಿಗೆ ಕರ್ನಾಟಕ ಭೂಷಣ ಪ್ರಶಸ್ತಿ

Source: sonews | By Staff Correspondent | Published on 1st August 2017, 10:08 PM | Coastal News | State News | Don't Miss |

ಭಟ್ಕಳ: ಇಲ್ಲಿನ ಅಂಜುಮಾನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಕೆ. ಫಝ್ಲುರ್ರಹ್ಮಾನ್ ಅವರಿಗೆ ಕರ್ನಾಟಕ ಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. 
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ, ಬೆಂಗಳೂರು ಇದರ ವತಿಯಿಂದ ಸಮಾಜ ಸೇವೆ, ಉದ್ಧಿಮೆ ಹಾಗೂ ಶೈಕ್ಷಣಿಕ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ಕರ್ನಾಟಕ ಭೂಷಣ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ. 
ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕೊಳದ ಮಠದ ಶಾಂತವೀರ ಮಹಾಸ್ವಾಮೀಜಿ, ರಾಜ್ ಮೀಡಿಯಾದ ಅಧ್ಯಕ್ಷರಾದ ಜಿ.ಬಿ.ರಾಜು, ಕು. ನ್ಯಾನ್ಸಿ ಗುಪ್ತ, ಕಾರವಾರದ ಇಬ್ರಾಹಿಂ ಕಲ್ಲೂರ್ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಡಾ. ಕೆ. ಫಝ್ಲುರ್ರಹ್ಮಾನ್ ಅವರಿಗೆ ಶಾಲು ಹೊದಿಸಿ, ಫಲಪುಷ್ಟ ನೀಡಿ ಕರ್ನಾಟಕ ಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.   
ಮೂಲತಹ ಆಂದ್ರ ಪ್ರದೇಶದವರಾದ ಇವರು ಹಲವಾರು ವರ್ಷಗಳಿಂದ ಇಲ್ಲಿನ ಅಂಜುಮಾನ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಸ್ತುತ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ಪ್ರಶಸ್ತಿ ಪುರಸ್ಕೃತರನ್ನು ಕಾಲೇಜಿನ ಪ್ರಾಂಶುಪಾಲ ಡಾ. ಮುಸ್ತಾಖ್ ಅಹಮ್ಮದ್ ಭಾವಿಕಟ್ಟಿ, ಉಪ ಪ್ರಾಂಶುಪಾಲ ಪ್ರೊ. ಎಚ್. ಎಂ. ಫಾಲಚಂದ್ರ, ಮಿಡಿಯಾ ಕೋ‌ಅರ್ಡಿನೇಟ್ ಪ್ರೊ. ಸುಬ್ರಹ್ಮಣ್ಯ ಭಾಗವತ್ ಅಭಿನಂದಿಸಿದ್ದಾರೆ. 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...