ಇದಾರೆ ಅದಬ್-ಇ-ಇಸ್ಲಾಮಿ ಹಿಂದ್ ರಾಷ್ಟ್ರೀಯ ಅಧ್ಯಕ್ಷ ಉಸ್ಮಾನಿಯವರಿಗೆ ಸನ್ಮಾನ

Source: sonews | By Staff Correspondent | Published on 2nd October 2017, 6:41 PM | Coastal News | State News | National News | Special Report | Don't Miss |

ಭಟ್ಕಳ: ರಾಷ್ಟ್ರೀಯ ಇಸ್ಲಾಮಿ ಸಾಹಿತ್ಯ ಆಂದೋಲನ ಇದಾರೆ ಅದಬ್-ಇ-ಇಸ್ಲಾಮಿ ಹಿಂದ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಟ್ಕಳ ಅಂಜುಮನ್ ಪದವಿ ಮಹಾವಿದ್ಯಾಲಯ ಉರ್ದು ವಿಭಾಗದ ಮುಖ್ಯಸ್ಥ ಡಾ.ಷಾ ರಷಾದ್ ಉಸ್ಮಾನಿಯವರಿಗೆ ಇದಾರೆ ಅದಬೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು. 


ಇತ್ತಿಚೆಗೆ ದೆಹಲಿಯಲ್ಲಿ ಜರಗಿದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಮುಂದಿನ ನಾಲ್ಕು ವರ್ಷದ ಅವಧಿಗಾಗಿ ಡಾ.ಉಸ್ಮಾನಿವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸಾಹಿತಿ ಡಾ.ಹನೀಫ್ ಶಬಾಬ್ ತಿಳಿಸಿದರು. 


ಸನ್ಮಾನ ಸ್ವೀಕರಿಸಿ ಮಾತನಾಡಿದ ಉಸ್ಮಾನಿ ಇಸ್ಲಾಮಿ ಸಾಹಿತ್ಯವು ಅಪಾರವಾದ ಜ್ಞಾನ ಭಂಡಾರವನ್ನು ಹೊಂದಿದ್ದು ಅಗೆದಷ್ಟು ಆಳವಾಗಿದೆ. ಸಾಹಿತ್ಯದ ಮೂಲಕ ಸಮಾಜದವನ್ನು ರೂಪಿಸುವ ಕೆಲಸ ಸಂಸ್ಥೆ ಮಾಡುತ್ತಿದೆ ಎಂದ ಅವರು ರಾಷ್ಟ್ರಮಟ್ಟದ ಹೊಣೆಗಾರಿಕೆ ನನ್ನ ಮೇಲೆ ಬಂದಿದ್ದು ಈ ಆಂದೋಲವನ್ನು ರಾಷ್ಟ್ರವ್ಯಾಪಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಅವರು ತಿಳಿಸಿದರು.


ಬಿಹಾರ ಮೂಲದವರಾದ ಕಳೆದ ೨೫ವರ್ಷಗಳಿಂದ ಭಟ್ಕಳದ ಅಂಜುಮನ್ ಸಂಸ್ಥೆಯಲ್ಲಿ ಉರ್ದು ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು ಹಲವಾರು ಸಾಹಿತ್ಯಿಕ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯದಲ್ಲಿ ರಚನಾತ್ಮಕತೆಯನ್ನು ಮೈಗೂಡಿಸಿಕೊಂಡಿರುವ ಇವರ ಲೇಕನಗಳು ಅಂತರಾಷ್ಟ್ರಿಯ ಮಟ್ಟದ ಪಾಕ್ಷಿಕ, ಮಾಸಿಕಗಳಲ್ಲೂ ಪ್ರಕಟಗೊಳ್ಳುತ್ತವೆ. 


ಈ ಸಂದರ್ಭದಲ್ಲಿ ಇದಾರೆ ಅದಬೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಕಾದಿರ್ ಮೀರಾ ಪಟೇಲ್, ಜಮಾ‌ಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ಕರಾವಳಿ ಕೆನರಾ ಕೌನ್ಸಿಲ್ ಅಧ್ಯಕ್ಷ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್, ಮೌಲಾನ ಸೈಯ್ಯದ್ದ ಝುಬೈರ್ ಸೇರಿದಂತೆ ಹಲವರು ಉಪಸ್ಥಿತಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...