ಎಂ.ಟೆಕ್ ಪರೀಕ್ಷೆ; ಭಟ್ಕಳದ ಫೈಝಾನ್ ವಿಟಿಯು ಗೆ ಪ್ರಥಮ ರ‍್ಯಾಂಕ್

Source: S O News service | By Staff Correspondent | Published on 22nd January 2017, 11:51 PM | Coastal News | State News | Don't Miss |

ಭಟ್ಕಳ: ಇಲ್ಲಿನ ಆಝಾದ್ ನಗರ ನಿವಾಸಿ ಮುಹಮ್ಮದ್ ಫೈಝಾನ್ ಕೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಎಂ.ಟೆಕ್ (ಮಾಸ್ಟರ್ ಆಫ್ ಟೆಕ್ನೊಲೋಜಿ)ನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿಕೊಂಡಿದ್ದು ಭಟ್ಕಳ ಹಾಗೂ ಉ.ಕ.ಜಿಲ್ಲೆಗೆ ಕೀರ್ತಿ ತಂದಿದ್ದಾರೆ.  

ಇಲ್ಲಿನ ಪ್ರತಿಷ್ಟಿತ ಅಂಜುಮನ್ ಇನ್ಸಿಟ್ಯೂಟ್ ಆಫ್ ಟೆಕ್ನೋಲೊಜಿ ಅಂಡ್ ಮ್ಯಾನೇಜ್‌ಮೆಂಟ್ ನಲ್ಲಿ ಬಿ.ಇ ಪಧವಿಯನ್ನು ಪಡೆದಿರುವ ಇವರು  ತಮ್ಮ ಉನ್ನತ ವಿದ್ಯಾಭ್ಯಾಸವನ್ನು (ಎಂ.ಟೆಕ್)  ಬೆಂಗಳೂರಿನ ನಾಗರ್ಜುನ್ ಇಂಜಿನೀಯರಿಂಗ್ ಮತ್ತು ಟೆಕ್ನೋಲೊಜಿ ಕಾಲೇಜಿನಲ್ಲಿ ಮುಂದುವರೆಸಿದ್ದರು.  ಭಟ್ಕಳದ ಆಝಾದ್ ನಗರದ ಅತ್ಯಂತ ಬಡಕುಟಂಬದಲ್ಲಿ ಜನಿಸಿರುವ ಇವರು ತಾಯಿ ಮುಮ್ತಾಝ್ ಬೇಗಂ ರು ಮನೆಯಲ್ಲಿ ತಿಂಡಿ ತಿನಿಸುಗಳನ್ನು ಸಿದ್ದಪಡಿಸಿ ಮಾರಾಟ ಮಾಡಿ ತಮ್ಮ ಮಗನಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಸಿದ್ದಗೊಳಿಸಿದ್ದು ಎಲ್ಲರಿಗೂ ಮಾದರಿಯಾಗಿದೆ. 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...