ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಇಬ್ಬರ ಸಾವು; ಹಲವರಿಗೆ ಗಾಯ

Source: S O New service | By Staff Correspondent | Published on 19th March 2018, 11:41 PM | State News | Don't Miss |

ಭಟ್ಕಳ: ಭಾನುವಾರ ರಾತ್ರಿಯಿಂದ ಸೋಮವಾರ ಸಂಜೆವರೆಗೆ ರಾಜ್ಯದ ವಿವಿಧೆಡೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಅಲ್ಲದೆ ಪ್ರಾಣಿಗಳು ಮೃತಪಟ್ಟಿದ್ದು ಸಾವಿರಾರು ರೂ ಆಸ್ತಿ ನಷ್ಟವಾಗಿರುವ ಕುರಿತು ವರದಿಯಾಗಿದೆ.

ಪುತ್ತೂರು ತಾಲೂಕಿನ ಸವಣೂರಿನ ಪುಣ್ಚಪ್ಪಾಡಿ ಎಂಬಲ್ಲಿ  ಧನುಂಜಯ ಎಂಬುವವರು  ಹಾಗೂ  ಉತ್ತಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನಮನೆಯ ನಿವಾಸಿ ಸಾವಿತ್ರಿ ನಾಯ್ಕ್ (೪೦) ಎಂಬುವವರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಸಿದ್ದಾಪುರ ತಾಲುಕಾ ಅವರಗುಪ್ಪಾದಲ್ಲಿ ಆಲೆಮನೆಯಲ್ಲಿ ಕೆಲಸ ಮಾಡುತ್ತಿರುವಾಗ 1) ರೇವಣ್ಣ ಬಂಗಾರ್ಯ ನಾಯ್ಕ. 53 ವರ್ಷ ಸಾ: ಅವರಗುಪ್ಪಾ. 2)ಮಾಬ್ಲೇಶ್ವರ ಗೌರ್ಯ ನಾಯ್ಕ 50 ವರ್ಷ ಸಾ: ಅವರಗುಪ್ಪಾ ಇವರಿಗೆ ಸಿಡಿಲು ಬಡಿದು ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ ಮತ್ತು ಒಂದು ಕೋಣ ಸಿಡಿಲು ಬಡಿದು ಸತ್ತು ಹೋಗಿರುತ್ತದೆ. ಪುತ್ತೂರಿನ ಗೀತಾ ಹಾಗೂ ದೊಡ್ಡಪ್ಪ ಕುಂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಯುಭಾರ ಕುಸಿತದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಇಂದೂ ಕೂಡಾ ಮಳೆಯಾಗಿದ್ದು, ಸವಣೂರು ಪರಿಸರದಲ್ಲಿ ಗಾಳಿ, ಮಳೆ ಜೊತೆಗೆ ಸಿಡಿಲಿನ ಆರ್ಭಟವೂ ಹೆಚ್ಚಾಗಿತ್ತು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...