ಭಟ್ಕಳ:ಕಿತ್ರೆಯಲ್ಲಿ ಧರೆ ಕುಸಿತ- ಅಧಿಕಾರಿಗಳು ದೌಡು, ಪರಿಶೀಲನೆ

Source: SO News | By MV Bhatkal | Published on 2nd October 2023, 12:34 AM | Coastal News | Don't Miss |

ಭಟ್ಕಳ: ತಾಲೂಕಿನ ಮಾರುಕೇರಿ ಗ್ರಾಪಂ ವ್ಯಾಪ್ತಿಯ ಕಿತ್ತೆಯಲ್ಲಿ ಮಣ್ಣಿನ ರಸ್ತೆಗೆ ಹೊಂದಿಕೊಂಡು ಇರುವ ಗುಡ್ಡ ಪ್ರದೇಶದಲ್ಲಿ ಬೆಳಿಗ್ಗೆ ಮಣ್ಣು ಕುಸಿದು ಬಿದ್ದಿದ್ದು, ಇದೀಗ ಅಲ್ಲಿಯೇ ಇದ್ದ ದೊಡ್ಡ ಬಂಡೆಯೊಂದು ಉರುಳಿ ಬೀಳುವ ಆತಂಕ ಎದುರಾಗಿದೆ.
ಬಂಡೆ ಇರುವ ಜಾಗಕ್ಕೆ ಸರಿಸುಮಾರು 10- 15 ಅಡಿ ದೂರದಲ್ಲಿ 4-5 ಮನೆಗಳಿದ್ದು, ಗುಡ್ಡಕ್ಕೆ ತಾಗಿಕೊಂಡ ರಸ್ತೆಯಲ್ಲಿ ನಿತ್ಯವೂ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು, ದನ ಕರುಗಳು ಓಡಾಡಿಕೊಂಡಿರುತ್ತವೆ. ಕಳೆದ 2-3 ದಿನಗಳಿಂದ ಮಳೆ ಸ್ವಲ್ಪ ಜೋರಾಗಿಯೇ ಸುರಿಯುತ್ತಿದ್ದು, ಮಣ್ಣು ಸಡಿಲಗೊಂಡು ಕುಸಿಯುತ್ತಿರುವುದರಿಂದ ಬಂಡೆ ಕೆಳಕ್ಕೆ ಒರಗುವ ಸಾಧ್ಯತೆಯೂ ಇದೆ. ಆದ್ದರಿಂದ ಅನಾಹುತ ಸಂಭವಿಸುವ ಮೊದಲೇ ಬಂಡೆ ತೆರವಿಗೆ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ತಹಶೀಲ್ದಾರ ತಿಪ್ಪೇಸ್ವಾಮಿ, ಮಾರುಕೇರಿ ಗ್ರಾಪಂ ಅಧ್ಯಕ್ಷೆ ನಾಗವೇಣಿ ಗೊಂಡ, ಉಪಾಧ್ಯಕ್ಷ ಎಮ್.ಡಿ.ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...