ಭಟ್ಕಳ; ನ್ಯೂ ಶಮ್ಸ್ ಶಾಲೆ ಗೆ ಪ್ರತಿಷ್ಟಿತ ‘ರಾಬಿತಾ ಬೆಸ್ಟ್ ಸ್ಕೂಲ್ ಅವಾರ್ಡ್’

Source: sonews | By Staff Correspondent | Published on 3rd August 2019, 4:32 PM | Coastal News | Don't Miss |

ಭಟ್ಕಳ: ತಾಲೂಕಿನ ಹೆಬಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಜಾಮಿಯಾಬಾದ್ ನಲ್ಲಿರುವ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಶಾಲೆ 2018-19ನೇ ಸಾಲಿನ ‘ಉಸ್ಮಾನ್ ಹಸನ್ ಜುಬಾಪು ಸ್ಮಾರಕ ರಾಬಿತಾ ಬೆಸ್ಟ್ ಸ್ಕೂಲ್ ಅವಾರ್ಡ್’ ಪುರಸ್ಕಾರಕ್ಕೆ ಬಾಜನವಾಗಿದೆ. 

ಶುಕ್ರವಾರ ಸಂಜೆ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲಾ ಮೈದಾನದಲ್ಲಿ ಜರಗಿದ ರಾಬಿತಾ ಶೈಕ್ಷಣಿಕ ಪುರಸ್ಕಾರ ಸಮಾರಂಭದಲ್ಲಿ ‘ಉಸ್ಮಾನ್ ಹಸನ್ ಮೆಮೊರಿಯಲ್ ರೋಲಿಂಗ್ ಶೀಲ್ಡ್ ಸ್ವೀಕರಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್, ಭಟ್ಕಳದ ಪ್ರೇಮ್ ಚಿತ್ರಮಂದಿರವನ್ನು ವಿದ್ಯಾರ್ಥಿಗಳ ಜೀವನ ರೂಪಿಸುವ ಶಾಲೆಯನ್ನಾಗಿ ಪರಿವರ್ತಿಸಿದ ಕೀರ್ತಿ ತರಬಿಯತ್ ಎಜ್ಯುಕೇಶನ್ ಸೂಸೈಟಿಗಿದೆ. ನಮ್ಮ ಸಂಸ್ಥೆ ಕಳೆದ 47 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಐ.ಸಿ.ಎಸ್.ಇ ಪಠ್ಯಕ್ರಮದಡಿ ಆರಂಭಗೊಂಡಿರುವ ನ್ಯೂ ಶಮ್ಸ್ ಸ್ಕೂಲ್ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಶೇ.100 ಫಲಿತಾಂಶವನ್ನು ದಾಖಲಿಸುತ್ತ ಬಂದಿದೆ. ವೈಯಕ್ತಿಕವಾಗಿಯೂ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಾರೆ. ಅಲ್ಲದೆ ಇಲ್ಲಿನ ಶಿಕ್ಷಕರು ಕೇವಲ ಕಲಿಕೆಗೆ ಮಾತ್ರ ಗಮನ ಕೊಡದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣೆಗೆಗಾಗಿ ನಿರಂತರ ಶ್ರಮಿಸುತ್ತಾರೆ. ನಮ್ಮಲ್ಲಿ ಸುಸಜ್ಜಿತವಾದ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಅಲ್ಲದೆ ಚಟುವಟಿಕೆಯಾಧರಿ ಕಲಿಕಾ ಸಾಮಾಗ್ರಿಗಳು ಹೊಂದಿದ್ದು ಇದರಿಂದಾಗಿ ಶಿಕ್ಷಕ ಹಾಗೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು. 

ನಂತರ ಮಾತನಾಡಿದ ಶಾಲಾ ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ, 2017ರಲ್ಲಿ ನಮ್ಮ ಸಂಸ್ಥೆಗೆ ಬೆಸ್ಟ್ ಸ್ಕೂಲ್ ಆವಾರ್ಡ ಬಂದಿದ್ದು ಎರಡು ಸಲ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನಮ್ಮ ಶಾಲೆಯ ಶಿಕ್ಷಕರು ಪಡೆದುಕೊಂಡಿದ್ದಾರೆ. ಅಲ್ಲದೆ ಈಗ ಎರಡನೇ ಬಾರಿ ನಮಗೆ ‘ಉತ್ತಮ ಶಾಲೆ’ ಎಂದು ರಾಬಿತಾ ಸಂಸ್ಥೆ ಗುರುತಿಸಿತಿ. ನಮ್ಮಲ್ಲಿ ಗುಣಮಟ್ಟದ ಶಿಕ್ಷಣ ಜತೆಗೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಚಿಂತನೆ, ಜೀವನ ಕೌಶಲ್ಯ, ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ವಿಶೇಷ ಗಮನ ನೀಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಪರಧರ್ಮ ಸಹಿಷ್ಣುತೆ, ಸಹೋದರತೆ, ಬ್ರಾತೃತ್ವವನ್ನು ಬೆಳೆಯುವಂತಾಗಲು ಅವರನ್ನು ವಿವಿಧ ಧರ್ಮಿಯರೊಂದಿಗೆ ಸಂವಾದಿಸುವ, ಅವರನ್ನು ಭೇಟಿಯಾಗುವ ಅವಕಾಶವನ್ನು ಮಾಡಿಕೊಡಲಾಗುತ್ತದೆ ಎಂದರು.  

ಈ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್, ಸ್ಕೂಲ್ ಬೋರ್ಡ್ ಚೇರಮನ್ ಕಾದಿರ್ ಮೀರಾ ಪಟೇಲ್, ನಿರ್ಮಾಣ ಸಮಿತಿಯ ಸಂಚಾಲಕ ಎಸ್.ಕೆ. ಸೈಯ್ಯದ್  ಸಲಾಹುದ್ದೀನ್ ಖಮರ್ ಸಾದಾ,  ಮುಂಬಾಯಿ ಅಂಜುಮನ್ ಇಸ್ಲಾಮ್ ಸಂಸ್ಥೆಯ ಅಧ್ಯಕ್ಷ ಡಾ.ಝಹೀರ್ ಖಾಝಿ, ರಾಬಿತಾ ಸಂಸ್ಥೆಯ ಮುಹಮ್ಮದ್ ಯೂನೂಸ್ ಖಾಝಿಯಾ, ಡಿವೈಎಸ್ಪಿ ವೆಲೆಂಟೆನ್ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...