ಗುಜರಾತಿನ 17 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

Source: PTI | By MV Bhatkal | Published on 13th September 2021, 11:50 PM | National News | Don't Miss |

ಅಹಮದಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ವಿಜಯ್ ರೂಪಾನಿ ಅಚ್ಚರಿ ರೀತಿಯಲ್ಲಿ ನಿರ್ಗಮನದ ನಂತರ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದ ಪಟೇಲ್(59) ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. 
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಅಚಾರ್ಯ ದೆವವ್ರತಾ ಭೂಪೇಂದ್ರ ಪಟೇಲ್ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.  ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಕೆಲ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

ಇಂದು ಪಟೇಲ್ ಮಾತ್ರ ಪ್ರಮಾಣ ವಚನ ಸ್ವೀಕರಿಸಿದರು, ಇನ್ನೂ ಕೆಲವೇ ದಿನಗಳಲ್ಲಿ ಸಂಪುಟ ಸೇರಲಿರುವ ಸಚಿವರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಬಿಜೆಪಿ ಮೂಲಗಳು ಹೇಳಿವೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...