ಬಿಹಾರ ಚುನಾವಣೆ; ಆರ್.ಜೆ.ಡಿ ಗೆ ಬೆಂಬಲ ಘೋಷಿಸಿದೆ ಸಮಾಜವಾದಿ ಪಕ್ಷ

Source: sonews | By Staff Correspondent | Published on 22nd September 2020, 6:10 PM | National News |

ಹೊಸದಿಲ್ಲಿ:ಅತ್ಯಂತಪ್ರಮುಖ ಬೆಳವಣಿಗೆಯೊಂದರಲ್ಲಿ ಸಮಾಜವಾದಿ ಪಕ್ಷ(ಎಸ್ಪಿ)ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿರುವುದಲ್ಲದೆ, ಸ್ಪರ್ಧೆಯ ಬದಲಿಗೆ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ಕ್ಕೆ ಬೆಂಬಲ ನೀಡುವುದಾಗಿ ಹೇಳಿದೆ.

ಸಮಾಜವಾದಿ ಪಕ್ಷ ಸೆಪ್ಟಂಬರ್ 21 ಸೋಮವಾರ ಟ್ವಿಟರ್‌ನ ಮೂಲಕ ಈ ಘೋಷಣೆ ಮಾಡಿದೆ.

 ಹೌದು ಪಕ್ಷ ಇಂತಹ ನಿರ್ಧಾರ ಕೈಗೊಂಡಿದ್ದು, ಆ ನಂತರ ಘೋಷಣೆ ಮಾಡಿದೆ ಎಂದು ಎಸ್ಪಿ ಎಂಎಲ್‌ಸಿ ಉದಯವೀರ್ ಸಿಂಗ್ ಹೇಳಿದ್ದಾರೆ.

ಎಸ್ಪಿ ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಎರಡು ಕಾರಣವಿದೆ. ಒಂದನೆಯದು ಸಮಾನಮನಸ್ಕ ಪಕ್ಷಗಳನ್ನು ದುರ್ಬಲಗೊಳಿಸಲು ಪಕ್ಷ ಬಯಸುವುದಿಲ್ಲ. ಎರಡನೇಯದು ಬಿಹಾರದಲ್ಲಿ ಎಸ್ಪಿ ಬಲಿಷ್ಠ ನೆಲೆ ಹೊಂದಿಲ್ಲ. ಹೀಗಾಗಿ ತನ್ನ ಶಕ್ತಿ ಹಾಗೂ ಸಂಪನ್ಮೂಲಗಳನ್ನು ವ್ಯರ್ಥ ಮಾಡಲು ಸಿದ್ಧವಿಲ್ಲ ಎಂದು ಪಕ್ಷದಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

 2015ರಲ್ಲಿ ಎಸ್ಪಿ ಸೀಟು ಹಂಚಿಕೆ ವಿವಾದದಿಂದಾಗಿ ಆರ್‌ಜೆಡಿ, ಜೆಡಿಯು ಹಾಗೂ ಕಾಂಗ್ರೆಸ್ ಮಹಾಮೈತ್ರಿಕೂಟದಿಂದ ಹೊರಗುಳಿದು ಎನ್‌ಸಿಪಿಯೊಂದಿಗೆ ಸ್ಪರ್ಧಿಸಿತ್ತು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...