ಭಟ್ಕಳ: ರಸ್ತೆ ಅಪಘಾತ; ಇಬ್ಬರು ಗಂಭೀರ

Source: S O News service | By sub editor | Published on 17th February 2017, 11:30 PM | Coastal News | Incidents | Don't Miss |

ಭಟ್ಕಳ: ಬೈಕ್ ಹಾಗೂ ಸರ್ಕಾರಿ ಬಸ್ ನಡುವೆ ನಡೆದ ಅಪಾಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಇಲ್ಲಿನ ರಾ.ಹೆ.೬೬ರ ಹೊಟೆಲ್ ಸಿಟಿಲೈಟ್ ಬಳಿ ಜರಗಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಹನಿಫಾಬಾದ್ ನಿವಾಸಿ ಮೂಸಾ ಹಾಗೂ ಬದ್ರಿಯಾ ಕಾಲೋನಿಯ ಮುಹಮ್ಮದ್ ಅದ್ನಾನ್ ಎಂದು ಗುರುತಿಸಲಾಗಿದೆ. ಇವರ ಕಾಲಿಗೆ ಬಲವಾದ ಪೆಟ್ಟು ಬಿದ್ದಿದ್ದು ಇಲ್ಲಿನ

ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ಸಾಗಿಸಲಾಗಿದೆ.

ಉಡುಪಿಯಿಂದ ವಿಜಯಪುರಕ್ಕೆ ತೆರಳುವ ಸರ್ಕಾರಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...