ಕಲಘಟಗಿಯಲ್ಲಿ ಮತದಾರರ ಜಾಗೃತಿಗಾಗಿ ಬೈಕ್ ರ‍್ಯಾಲಿ

Source: so news | By Manju Naik | Published on 14th March 2019, 7:41 PM | State News | Don't Miss |

 

ಧಾರವಾಡ: ಮತದಾರರ ಜಾಗೃತಿಗಾಗಿ ಕಲಘಟಗಿ ಪಟ್ಟಣದಲ್ಲಿಂದು ಪಟ್ಟಣ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮತದಾರರ ಜಾಗೃತಿಗಾಗಿ ಬೈಕ್ ರ‍್ಯಾಲಿ ನಡೆಯಿತು.
ಪಟ್ಟಣ ಪಂಚಾಯತ್ ಆವರಣದಲ್ಲಿ ತಹಶೀಲ್ದಾರ ಅಶೋಕ ಶಿಗ್ಗಾಂವಿ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಬರುವ ಲೋಕಸಭಾ ಚುನಾವಣೆಗೆ ಎಪ್ರಿಲ್ ೨೩ ರಂದು ಮತದಾನ ನಡೆಯಲಿದೆ. ಕಲಘಟಗಿ ವಿಧಾನಸಭಾ ಕ್ಷೆತ್ರ ವ್ಯಾಪ್ತಿಯಲ್ಲಿ ಉತ್ತಮ ಮತದಾನ ಪ್ರಮಾಣ ದಾಖಲಿಸಲು ಪ್ರತಿಯೊಬ್ಬರು ಶ್ರಮಿಸಬೇಕು. ಮತದಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿ ಹೇಳಬೇಕು. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಬಳಕೆ ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲ ಮತಗಟ್ಟೆ ವ್ಯಾಪ್ತಿಗಳಲ್ಲಿ ಆಯೋಜಿಸಬೇಕು ಎಂದರು.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಶೇಖರ್, ಕ್ಷೆತ್ರಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ, ಶಿಕ್ಷಣ ಸಮನ್ವಯಾಧಿಕಾರಿ ಮಹಾವೀರ ಹಂಚಿನಾಳ, ಎಸ್.ಎ. ಚಿಕ್ಕನರ್ತಿ ಹಾಗೂ ಮತ್ತಿತರರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ಸಂಚರಿಸಿತು.

Read These Next

ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದ ಸಭಾಧ್ಯಕ್ಷ ಕಾಗೇರಿ

ಬೆಂಗಳೂರು: ಒಂದೆಡೆ ಬರ ಮತ್ತು ಮತ್ತೊಂದೆಡೆ ನೆರೆಯ ಸಮಸ್ಯೆಗೆ ತುತ್ತಾಗಿ ಅರ್ಧ ರಾಜ್ಯವೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ...

`ಪಾಕಿಸ್ತಾನಕ್ಕೆ ಕರೆದೊಯ್ಯಲು ಬಂದಿದ್ದ ಆ ಗಾಡಿಯಲ್ಲಿ ನನ್ನ ದೇಹ ಇತ್ತು, ಆದರೆ ಅದಕ್ಕೆ ಜೀವ ಇದ್ದಿರಲಿಲ್ಲ...!'

ಭಾರತ ವಿದೇಶಾಂಗ ಇಲಾಖೆಯ ಆಜ್ಞಾನುಸಾರ ಹಡೆದ 3 ಮಕ್ಕಳನ್ನು ಭಾರತದಲ್ಲಿಯೇ ಬಿಟ್ಟು ಪಾಕಿಸ್ತಾನಕ್ಕೆ ಹೊರಟಿದ್ದ ಭಟ್ಕಳದ ಶಂಕಿತ ...