ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ; ಆದೇಶ, ಪ್ರಕ್ರಿಯೆಯ ದಾಖಲೆ ಸಲ್ಲಿಸುವಂತೆ ಗುಜರಾತ್‌ ಸರಕಾರಕ್ಕೆ ಸೂಚನೆ

Source: Vb | By I.G. Bhatkali | Published on 11th September 2022, 1:23 PM | National News |

ಹೊಸದಿಲ್ಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳಿಗೆ ನೀಡಲಾದ ಬಿಡುಗಡೆ ಆದೇಶ ಸೇರಿದಂತೆ ಪ್ರಕ್ರಿಯೆಯ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಗುಜರಾತ್ ಸರಕಾರಕ್ಕೆ ನಿರ್ದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಲು ಗುಜರಾತ್ ಸರಕಾರಕ್ಕೆ ಎರಡು ವಾರಗಳ ಕಾಲಾವಕಾಶವನ್ನು ಸುಪ್ರೀಂ ಕೋರ್ಟ್ ನೀಡಿದೆ.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಅವರ ಕುಟುಂಬದ 7 ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ ಜೀವಾವಧಿ ಶಿಕೆಗೆ ಒಳಗಾಗಿದ್ದ 11 ಮಂದಿ ಅಪರಾಧಿಗಳನ್ನು ಕಳೆದ ತಿಂಗಳು ಬಿಡುಗಡೆ ಮಾಡಲಾಗಿತ್ತು. ಶಿಕ್ಷೆಯಿಂದ ಬಿಡುಗಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಗುಜರಾತ್ ಸರಕಾರದ ಬಿಡುಗಡೆ ನೀತಿಯ ಅಡಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿತ್ತು. 11 ಮ೦ದಿ ಅಪರಾಧಿಗಳು ಕಾರಾ ಗೃಹದಲ್ಲಿ 15 ವರ್ಷ ಶಿಕ್ಷೆ ಅನುಭವಿಸಿದ್ದರು. ಇವರಲ್ಲಿ ಓರ್ವ ಅವಧಿಪೂರ್ವ ಬಿಡುಗಡೆ ಕೋರಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದ.

ಪ್ರಕರಣದ ಅಪರಾಧಿಗಳ ಬಿಡುಗಡೆ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡಿರುವುದನ್ನು ಹಿ೦ಪಡೆಯುವ೦ತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರರು ಹಾಗೂ ಇತಿಸಹಾಸಕಾರರು ಸೇರಿದಂತೆ 6,000ಕ್ಕೂ ಅಧಿಕ ಗಣ್ಯರು ಸುಪ್ರೀಂ ಕೋರ್ಟ್ ಅನ್ನು ಆಗ್ರಹಿಸಿದ್ದರು.

ಈ ಪ್ರಕರಣದ ಮುಂದಿನ ವಿಚಾರಣೆ ಮೂರು ವಾರಗಳ ಬಳಿಕ ನಡೆಯಲಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...