ಬಿಲ್ಕಿಸ್ ಬಾನು ಪ್ರಕರಣ; ತಪ್ಪಿತಸ್ಥರಿಗೆ ಕ್ಷಮಾದಾನ ಅಮಾನವೀಯ, ಅನೈತಿಕ

Source: Vb | By I.G. Bhatkali | Published on 29th September 2022, 11:59 PM | National News |

ಹೊಸದಿಲ್ಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಎಲ್ಲ 11 ಅಪರಾಧಿಗಳ ಬಿಡುಗಡೆಯು ಅಮಾನವೀಯ ಮತ್ತು ಅನೈತಿಕವಾಗಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು, ಮಾಜಿ ಸರಕಾರಿ ಅಧಿಕಾರಿಗಳು ಮತ್ತು ಕಲಾವಿದರು ಸೇರಿದಂತೆ 401 ಗಣ್ಯರನ್ನೊಳಗೊಂಡ ಗುಂಪು ಬುಧವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಗುಜರಾತ್ ಗಲಭೆಗಳ ಸಂದರ್ಭ 2002, ಮಾ.3ರಂದು ಅಹ್ಮದಾಬಾದ್ ಸಮೀಪದ ಗ್ರಾಮದಲ್ಲಿ 11 ಜನರು ಆಗ 19 ವರ್ಷದವಳಾಗಿದ್ದ ಮೂರು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನುವಿನ ಮೇಲೆ ಸಾಮೂಹಿಕ ಅತ್ಯಾಚಾರವನ್ನು ನಡೆಸಿದ್ದರು. ಬಾನುವಿನ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ 14 ಸದಸ್ಯರೂ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದರು. ಹೇಳಿಕೆಗೆ ಸಹಿ ಹಾಕಿದವರಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಜವಾಹರ ಸರ್ಕಾರ್, ನಟಿ ನಫೀಸಾ ಅಲಿ, ಪತ್ರಕರ್ತ ಪರಂಜಯ ಗುಹಾ ಥಾಕುರ್ತಾ, ಛಾಯಾಚಿತ್ರಗ್ರಾಹಕ ರಘು ರಾಯ್ ಮತ್ತು ಗಾಯಕಿ ಶುಭಾ ಮುದ್ದಲ್ ಸೇರಿದ್ದಾರೆ. ಕ್ಷಮಾದಾನವನ್ನು ಹಿಂದೆಗೆದುಕೊಳ್ಳುವಂತೆ ಅವರು ಸರಕಾರವನ್ನು ಆಗ್ರಹಿಸಿದ್ದಾರೆ. ಸ್ವಾತಂತ್ರ್ಯ ದಿನದಂದು ತಪ್ಪಿತಸ್ಥರನ್ನು ಬಿಡುಗಡೆಗೊಳಿಸಿದ ನಿರ್ಧಾರವು ಹೆಚ್ಚು ಅಮಾನವೀಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...