ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್

Source: S O News service | By I.G. Bhatkali | Published on 19th September 2021, 8:57 PM | State News |

ಬೆಂಗಳೂರು : ಕರ್ನಾಟಕ ದೇಶದಲ್ಲಿಯೇ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಹಲವು ಹೊಸತನಗಳ ಮತ್ತು ನವೋದ್ಯಮಗಳ ಉಗಮ ಸ್ಥಾನವಾಗಿದ್ದು, ಭಾರತದ ಬಯೋಟೆಕ್ನಾಲಜಿಯ ರಾಜಧಾನಿ ಬೆಂಗಳೂರು ಆಗಿದೆ ಎಂದು ಕೇಂದ್ರ ಜವಳಿ, ಗ್ರಾಹಕರ ವ್ಯವಹಾರ, ಆಹಾರ ಹಾಗೂ ನಾಗರೀಕ, ಕೈಗಾರಿಕೆ ಹಾಗೂ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ಅವರು ಹರ್ಷ ವ್ಯಕ್ತಪಡಿಸಿದರು.

ಇಂದು ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIಖಿ-ಃ)ಆವರಣದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉದ್ಯಮ ಹಾಗೂ ನವೋದ್ಯಮ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ ಜಾಗತಿಕ ಮಹಾಮಾರಿ ಕೋವಿಡ್ ನಿಯಂತ್ರಣಕ್ಕಾಗಿ ಭಾರತ್ ಬಯೋಟೆಕ್ನಾಲಜಿಯಂತಹ ಸಂಸ್ಥೆಯ ಕೊಡುಗೆ ಅಪಾರ, ದೇಶದ ಆರ್ಥಿಕ ಅಭಿವೃದ್ಧಿಗಾಗಿ ಬೆಂಗಳೂರು ನವೋದ್ಯಮದ ಮೂಲಕ ತನ್ನದೇ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.ಸರ್ಕಾರದ ಮಟ್ಟದಲ್ಲಿ ದೇಶದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂತಹ ಸಂವಾದಗಳು ಸಹಾಯವಾಗುತ್ತವೆ, ಇಲ್ಲಿನ ಸಂವಾದದ ಸಾರಂಶದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ನವದೆಹಲಿಗೆ ಬೇಟಿ ನೀಡಿ ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹಂಚಿಕೊಳ್ಳಲು ಅವಕಾಶವಿದೆ.

ಕೋವಿಡ್ ಸಮಯದಲ್ಲಾದ ಆರ್ಥಿಕ ತಲ್ಲಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಉದ್ಯಮಗಳ ಉಳಿವಿಗಾಗಿ ಹಾಗೂ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನವೋದ್ಯಮಿಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ನೇರವಾಗಿ ವಿವಿಧ ಕ್ಷೇತ್ರದ ಉದ್ಯಮಿಗಳ ಜೊತೆ ನಡೆಸುವ ಈ ರೀತಿಯ ಸಂವಾದಗಳು ಸರ್ಕಾರದ ಮಟ್ಟದಲ್ಲಿ ಹೊಸ ಕಾನೂನು ಹಾಗೂ ಯೋಜನೆಗಳನ್ನು ರೂಪಿಸುವಲ್ಲಿ ಸಹಾಯಕವಾಗುತ್ತವೆ, ಸಚಿವನಾಗಿ ನಾನು ಈ ರೀತಿಯ ಸಂವಾದಗಳಿಗೆ ಸದಾ ಕಿವಿಯಾಗಿರುತ್ತೇನೆ, ನಮ್ಮ ದೇಶದ ಉದ್ಯಮಿಗಳ ಬಗ್ಗೆ ಗೌರವವಿದೆ. ಜಗತ್ತಿನ ಶ್ರೇಷ್ಠ ರಪ್ತು ಉದ್ಯಮವನ್ನು ಸ್ಥಾಪಿಸುವ ಮೂಲಕ ಪ್ರದಾನ ಮಂತ್ರಿಗಳ ಆತ್ಮ ನಿರ್ಭರ ಭಾರತವನ್ನು ಕಟ್ಟಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಕರೆ ಕೊಟ್ಟರು.

ಇಂದಿನ ಸಂವಾದದಲ್ಲಿ ಕೆಲವು ಸಂಸ್ಥೆಗಳ ಮುಖ್ಯಸ್ಥರು ನೀಡಿದ ಸಲಹೆಗಳನ್ನು ಮತ್ತು ಸಮಸ್ಯೆಗಳನ್ನು ತಮಗೆ ನೇರವಾಗಿ ಪತ್ರ ಬರೆಯುವ ಮೂಲಕ ಪರಿಹಾರ ಕಂಡುಕೊಳ್ಳಲು ತಿಳಿಸಿದರು ಹಾಗೂ ಸಂಬಂಧ ಪಟ್ಟ ಇತರೆ ಇಲಾಖೆಗಳೊಂದಿಗೆ ತಾವು ಮಾತುಕತೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಿಕೊಡುವುದಾಗಿ ಭರವಸೆ ನೀಡಿದರು. ಇದೊಂದು ವಿಭಿನ್ನವಾದ ಮತ್ತು ಅತ್ಯುತ್ತಮ ಸಂವಾದವಾಗಿದ್ದು ತಮಗೆ ಅನೇಕ ಒಳಹುಗಳನ್ನು ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸಂವಾದದದಲ್ಲಿ ಮಾಹಿತಿ-ತಂತ್ರಜ್ಞಾನದ ರಾಜ್ಯ ಸರ್ಕಾರದ ಕಾರ್ಯದರ್ಶಿಗಳಾದ ರಮಣ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯದ ಕೊಡುಗೆ ಹಾಗೂ ಸ್ಥಾನಮಾನದ ಕುರಿತು ಮಾತನಾಡಿ ಸಚಿವರಿಗೆ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಹಿರಿಯ ಅಧಿಕಾಗಳು ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳಾದ ಶ್ರೀಮತಿ ಮೀನಾ ನಾಗರಾಜ್, ಇನ್ ಫೋಸಿಸ್ ಸಂಸ್ಥೆಯ ಸ್ಥಾಪಕ ಸದಸ್ಯರಾದ ಕ್ರಿಸ್ ಗೋಪಾಲ್ ಸೇರಿದಂತೆ ಹಲವಾರು ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಸಂವಾದದ ನಂತರ “ಜಿಸಿಸಿ ಇಂಡಿಯಾ ಲ್ಯಾಂಡಸ್ಕೇಪ್ 2021 & ಬಿಯಾಂಡ” ಕಿರು ಪುಸ್ತಕವನ್ನು ಬಿಡುಗಡೆ ಮಾಡಿ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಆಯೋಜಿಸಿದ್ದ ನಾವಿನ್ಯತಾ ಉದ್ಯಮದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.
 

Read These Next

ಬೆಂಗಳೂರು: 2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಸಚಿವ ಬಿ. ಶ್ರೀರಾಮುಲು

2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ...

ಬೆಂಗಳೂರು: ಅಕ್ಟೋಬರ್ 24ರಿಂದ ಒಂದು ವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಅಭಿಯಾನ - ಸಚಿವ ಸುನೀಲ್ ಕುಮಾರ್

ರಾಜ್ಯಾದಾದ್ಯಂತ 66ನೆ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...