ಜನನ-ಮರಣಗಳ ವಿವರ ಇ-ಜನ್ಮ ತಂತ್ರಾಂಶದಲ್ಲಿ ನೋಂದಾಯಿಸಿ : ಡಿಸಿ ಮುಲ್ಲೈ ಮುಗಿಲನ್.

Source: SO News | By Laxmi Tanaya | Published on 3rd September 2021, 9:13 PM | Coastal News |

ಕಾರವಾರ  :  ಜನನ-ಮರಣಗಳ ವಿವರಗಳನ್ನು ಶೇ. 100 ರಷ್ಟು ಇ-ಜನ್ಮ ತಂತ್ರಾಂಶದಲ್ಲಿ ನೊಂದಾಯಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಜನನ ಮರಣ ನೊಂದಣಿ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರಿ ಕಚೇರಿಗಳಲ್ಲಿ ದಾಲಾತಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲೇಬೇಕಿದ್ದು, ಮರಣ ನೋಂದಣಿ ಮಾಡುವಾಗ ವೈದ್ಯಾಧಿಕಾರಿಗಳಿಂದ ಮರಣ ಕಾರಣ ನಮೂದಿಸಲ್ಪಟ್ಟ ವೈದ್ಯಕೀಯ ಪ್ರಮಾಣ ಪತ್ರ ನಮೂನೆಯನ್ನು ಪಡೆದುಕೊಂಡು ಸರಿಯಾಗಿ ಪರಿಶೀಲಿಸಿ ನೋಂದಾಯಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜನನ ಮರಣ ಘಟನೆಗಳನ್ನು ಡಿಜಿಟಲ್ ಸಹಿಯೊಂದಿಗೆ ಅನುಮೋದನೆ ನೀಡಿ ಪ್ರಮಾಣ ಪತ್ರ ವಿತರಿಸಬೇಕು ಹಾಗೂ ತಾಲೂಕಾ ಮಟ್ಟದಲ್ಲಿಯೂ ಸಮನ್ವಯ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ನಡೆಸಲು ಸೂಚಿಸಿದರು. 

ಜಿಲ್ಲೆಯಲ್ಲಿ 2020ರ ಜನವರಿ ತಿಂಗಳಿನಿಂದ ಡಿಸೆಂಬರ್‍ ವರೆಗೆ ಇ-ಜನ್ಮ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕೋವಿಡ್ ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿಯಾದ ಮರಣ ಘಟನೆಗಳೊಂದಿಗೆ ಮರುಹೊಂದಾಣಿಕೆ ಮಾಡಿದ ಸಾಂಖ್ಯಿಕ ಹಾಗೂ ಆರೋಗ್ಯ ಇಲಾಖೆಯ ವರದಿಯನ್ನು ಬೆಂಗಳೂರಿನ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಇವರಿಗೆ ಕಳುಹಿಸಬೇಕು ಎಂದರು. 

ಸಭೆಯಲ್ಲಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ತಹಶೀಲ್ದಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯತ ಉಪಕಾರ್ಯದರ್ಶಿಗಳು, ಆರಕ್ಷಕ ಇಲಾಖೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...