ಶ್ರೀನಿವಾಸಪುರ: ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ

Source: sonews | By Staff Correspondent | Published on 24th October 2020, 3:35 PM | State News |

ಶ್ರೀನಿವಾಸಪುರ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು.

ಪಟ್ಟಣದ ವಿಐಪಿ ಸಂಸ್ಥೆಯ ಆವರಣದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಶುಕ್ರವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಅಭ್ಯರ್ತಿ ಚಿನಾದನಂದ ಎಂ ಗೌಡ, ಪದವೀಧರರ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರ ಜನಪರ ಕಾಳಜಿ ಹಾಗೂ  ಬಿಜೆಪಿ ಸರ್ಕಾರದ ಸಾಧನೆ ಅವರಿಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌ ಮಾತನಾಡಿ, ಈ ಹಿಂದೆ ಈ ಕ್ಷೇತ್ರದಿಂದ ಅನುಕಂಪದ ಅಲೆಯಲ್ಲಿ ಗೆದ್ದಿದ್ದ ವ್ಯಕ್ತಿ ಹಬ್ಬ ಹರಿದಿನಗಳಿಗೆ ಮೆಸೇಜ್‌ ಮಾಡುವುದನ್ನು ಬಿಟ್ಟರೆ ಸಾಧನೆ ಶೂನ್ಯವಾಗಿದೆ. ಆಗ್ನೇಯ ಪದವೀಧರ ಕ್ಷೇತ್ರ ಹಿಂದಿನಿಂದಲೂ ಬಿಜೆಪಿ ಪ್ರಾಬಲ್ಯವಿದ್ದು, ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಗೆಲ್ಲುವುದರಲ್ಲಿ ಅನುಮಾನವಿಲ್ಲ. ಆದರೆ ಹೆಚ್ಚಿನ ಮತಗಳಿಂದ ಗೆಲ್ಲಬೇಕು. ಅದಕ್ಕೆ ಮತದಾರರ ಸಹಕಾರ ಅಗತ್ಯ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ದಿಗೆ ಪೂರಕವಾಗಿವೆ. ಕೊರೊನಾ ಸಂಕಷ್ಟದ ನಡುವೆಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾದರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಮುಖಂಡರಾದ ಕೇಶವ ಪ್ರಸಾದ್‌, ಎಸ್‌.ವಿ.ಮುನಿವೆಂಕಟಪ್ಪ, ಕಾಂತರಾಜ್‌, ನಾಗರಾಜ್‌, ಅಶೋಕರೆಡ್ಡಿ, ವಿಐಪಿ ನಾಗರಾಜ್‌, ಇ.ಶಿವಣ್ಣ, ಎಂ.ಲಕ್ಷ್ಮಣಗೌಡ, ಜಯರಾಮರೆಡ್ಡಿ, ಶಿವಶಂಕರ್‌ ಕೇಶವ ಪ್ರಸಾದ್‌, ಕಾಂತರಾಜ್‌, ಸುರೇಶ್‌ ನಾರಾಯಣ್‌, ಕೃಷ್ಣಮೂರ್ತಿ, ಅಂಬರೀಶ್‌, ಶಿವು, ನಾರಾಯಣಸ್ವಾಮಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...