ವೋಟರ್ ಐಡಿ ಹಗರಣ ಮರೆಮಾಚಲು 'ಕುಕ್ಕರ್ ಸ್ಫೋಟ ನಾಟಕ': ಡಿಕೆಶಿ

Source: Vb | By I.G. Bhatkali | Published on 16th December 2022, 9:24 AM | Coastal News | State News |

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕವಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಹಗರಣವನ್ನು ಮರೆಮಾಚುವ ಸಲುವಾಗಿ ಮಂಗಳೂ ರಿನಲ್ಲಿ ಕುಕ್ಕರ್ ಸ್ಫೋಟ ನಾಟಕ ಹುಟ್ಟುಹಾಕಲಾಯಿತು ಎಂದು ಟೀಕಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಬೆಂಗಳೂರು ಪ್ರೆಸ್‌ಕ್ಲಬ್ ಹಮ್ಮಿಕೊಂಡಿದ್ದ 'ಮಾಧ್ಯಮ ಸಂವಾದ'ವನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹಗರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ದಿಢೀರ್ ಸ್ಫೋಟ ನಡೆಯಿತು. ಆನಂತರ ನಾಟಕೀಯ ಬೆಳವಣಿಗೆಯಂತೆ ಖುದ್ದು ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಹೋಗಿ ಪರಿಶೀಲನೆ ನಡೆಸಿದರು. ಆದರೆ, ಆ ಪ್ರಕರಣ ಯಾವ ಹಂತ ತಲುಪಿದೆ ಎಂದು ಪ್ರಶ್ನಿಸಿದರು.

ಮತ್ತೊಂದೆಡೆ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು. ಇದರ ಹಿಂದೆ ಯಾವ ಉಗ್ರ, ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ ಎಂಬು ವುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ಅದು ಅಲ್ಲದೆ, ಮತ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿಹಾಕಲು ಈ ಷಡ್ಯಂತ್ರ ರೂಪಿಸಿದ್ದಾರೆ. ಮತದಾರನ ಹಕ್ಕು ಕಳವು ಇಡೀ ದೇಶದಲ್ಲಿ ಆಗಿರಲಿಲ್ಲ. ಈಗ ಇದನ್ನು ಮಾಡಿ ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ ಎಂದು ಸರಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಮತದಾರರ ಮಾಹಿತಿ ಕಳವು ಮಾಡಲಾಗಿದೆ. ಮನೆಗಳಿಲ್ಲದಿದ್ದರೂ ಮನೆ ಇದೆ ಎಂದು ಮತದಾರರನ್ನು ಸೇರಿಸಿ ಕಾಂಗ್ರೆಸ್ ಮತದಾರರನ್ನು ತೆಗೆದು ಹಾಕಿದ್ದಾರೆ. 8.7 ಸಾವಿರ ಬಿಎಲ್‌ಒ ಸ್ಥಾನವನ್ನು ಖಾಸಗಿಯವರಿಗೆ ನೀಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಆಪಾದಿಸಿದರು.

ಈ ರೀತಿ ಚುನಾವಣೆ ಗೆಲ್ಲಬೇಕಾ? ಬಂಧಿತ ಅಧಿಕಾರಿಗಳು, ಶಾಸಕರು ಹಾಗೂ ಮಂತ್ರಿಗಳ ಆದೇಶದಂತೆ ಕೆಲಸ ಮಾಡಿದ್ದಾರೆ. ಅವರ ಮೇಲೆ ಯಾರೂ ಪ್ರಕರಣ ದಾಖಲಿಸುತ್ತಿಲ್ಲ. ಮತ್ತೊಂದೆಡೆ ಸಿಎಸ್‌ಸಿ ಹೆಸರಲ್ಲಿ ಕೆಲವು ರೈತರ ಖಾತೆಗೆ ಕೇಂದ್ರ ಸರಕಾರದ ಹಣ ಹಾಕಿ ಅವರಿಂದ ಹಣ ಪಡೆಯಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳು ಮೃಧು ಧೋರಣೆ ತೋರುತ್ತಿವೆ ಎಂದು ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

Read These Next

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...