ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

Source: SOnews | By Staff Correspondent | Published on 5th April 2024, 6:39 PM | State News | National News |

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.  

ಈ ಬಗ್ಗೆ 'X'ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.  

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.  ಬಿಜೆಪಿ ಕಾರ್ಯಕರ್ತನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥ ಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರೆಸ್ಸೆಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.   ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದೆ ಮುಂಜಾನೆ ಎನ್ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಅದರ ಬೆನ್ನಲ್ಲೇ ತೀರ್ಥಹಳ್ಳಿಯ ಬಿಜೆಪಿಯ ಕಾರ್ಯಕರ್ತ ಸಾಯಿ ಪ್ರಸಾದ್ ನನ್ನು ವಶಕ್ಕೆ ಪಡೆದು ಕರೆದೊಯ್ದು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದು ಬಂದಿದೆ. ಆದರೆ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದಿರುವ ಬಗ್ಗೆ ಎನ್.ಐ.ಎ. ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Read These Next

ಶಿರೂರು ಗುಡ್ಡ ಕುಸಿತ; ಗಂಗಾವಳಿ ನದಿಯಲ್ಲಿ ಟ್ರಕ್ಕೊಂದು ಮುಳುಗಿರುವುದನ್ನಖಚಿತ ಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್‌ನೊಂದಿಗೆ ನಾಪತ್ತೆಯಾಗಿದ್ದ ...

ಅಂಕೋಲಾ ಗುಡ್ಡ ಕುಸಿದು ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ; ಸರ್ಕಾರದಿಂದ ಘೋಷಣೆ

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5ಲಕ್ಷ ರೂ.ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ...

ಡೆಹ್ರಾಡೂನ್: ಕ್ರೈಸ್ತ ಪ್ರಾರ್ಥನಾ ಸಭೆಯ ಮೇಲೆ ಸಂಘ ಪರಿವಾರದಿಂದ ದಾಳಿ; ಏಳು ಜನರಿಗೆ ಹಲ್ಲೆ

ಸಂಘ ಪರಿವಾರ ಕಾರ್ಯಕರ್ತರ ಗುಂಪೊಂದು ರವಿವಾರ ಇಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದೆ. ಕನಿಷ್ಠ ...

ಲೋಕಸಭಾ ಚುನಾವಣೆಯ ಬಳಿಕ ಮುಸ್ಲಿಮರ ವಿರುದ್ಧ ಗುಂಪು ದಾಳಿ ಪ್ರಕರಣದಲ್ಲಿ ಹೆಚ್ಚಳ; ಜಮಾಅತೆ ಇಸ್ಲಾಮೀ ಹಿಂದ್ ಕಳವಳ

ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ...

ಬ್ರಿಟಿಷ್ ಯುಗದ ಕಾನೂನುಗಳಿಗೆ ತೆರೆ; ಇಂದಿನಿಂದ ಮೂರು ನೂತನ ಕ್ರಿಮಿನಲ್ ಕಾಯ್ದೆಗಳು ಜಾರಿ

ಸೋಮವಾರ, ಜುಲೈ 1ರಂದು ಮೂರು ನೂತನ ಕ್ರಿಮಿನಲ್ ಕಾನೂನುಗಳು ದೇಶಾದ್ಯಂತ ಜಾರಿಗೊಳ್ಳಲಿದ್ದು ಬ್ರಿಟಿಷ್ ಯುಗದ ಕಾನೂನುಗಳು ಅಸ್ತಿತ್ವ ...