ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ-ಸಿಎಲ್ಪಿ ನಾಯಕ  ಸಿದ್ದರಾಮಯ್ಯ ಆರೋಪ

Source: sonews | By Staff Correspondent | Published on 8th July 2019, 3:21 PM | State News | National News | Don't Miss |

ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವದ  ಮೇಲೆ ನಂಬಿಕೆ ಇಲ್ಲ.  ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ದೊಡ್ಡ ಪ್ರಹಾರ ಮಾಡಿದೆ.   ರಾಜ್ಯದಲ್ಲಿ ಸಮ್ಮಿಶ್ರ ಸರಕಾರವನ್ನು ಕಳೆದ  ಒಂದು ವರ್ಷದಲ್ಲಿ  ಆರನೇ ಬಾರಿ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಮಾಜಿ ಮುಖ್ಯ ಮಂತ್ರಿ, ಸಿಎಲ್ ಪಿ ನಾಯಕ  ಸಿದ್ದರಾಮಯ್ಯ  ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐಟಿ, ಈ.ಡಿ.ಯನ್ನು ಮುಂದಿಟ್ಟು ಬಿಜೆಪಿ ನಾಯಕರು ಶಾಸಕರನ್ನು ಹೆದರಿಸುತ್ತಿದ್ದಾರೆ.ಇದರಲ್ಲಿ  ರಾಜ್ಯ ಬಿಜೆಪಿ ನಾಯಕರ ಪಾತ್ರ ಇಲ್ಲ. ಕೇಂದ್ರ ನಾಯಕರು  ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಬಿಜೆಪಿ ನಾಯಕರ  ಪ್ರಯತ್ನವನ್ನು ವಿಫಲಗೊಳಿಸಲು ನಮ್ಮ ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವನ್ನು ಪುನರ್ರಚನೆ ಮಾಡಲಾಗುವುದು  ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್  ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶದಲ್ಲಿ ಇದನ್ನೇ ಮಾಡಿದ್ದಾರೆ ಕಳೆದ 5 ವರ್ಷಗಳಲ್ಲಿ  ಹಲವು ಸರಕಾರಗಳನ್ನು ಬಿಜೆಪಿ ನಾಯಕರು  ಅಸ್ಥಿರಗೊಳಿಸಿದ್ದಾರೆ. ಲೋಕಸಭೆಯ ಚುನಾವಣೆಯ ಬಳಿಕ ಸಂವಿಧಾನ ವಿರೋಧಿ ಕೆಲಸ ನಡೆಯುತ್ತಿದೆ ಎಂದು ಹೇಳಿದರು. 

ಬಿಜೆಪಿ ಕುದುರೆ ವ್ಯಾಪಾರದಲ್ಲಿ ಭಾಗಿಯಾಗಿಲ್ಲ-ರಾಜ್ ನಾಥ್ ಸಿಂಗ್

ಕರ್ನಾಟಕದಲ್ಲಿ ಕುದುರೆ ವ್ಯಾಪಾರದಲ್ಲಿ ಬಿಜೆಪಿ ಭಾಗಿಯಾಗಿಲ್ಲ. ಶಾಸಕರ ರಾಜೀನಾಮೆಯಲ್ಲಿ ಬಿಜೆಪಿ ಕೈವಾಡ  ಇಲ್ಲ ಎಂದು ಲೋಕಸಭೆಯಲ್ಲಿ ರಕ್ಷಣಾ ಸಚಿವ  ರಾಜ್ ನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್  ಸದಸ್ಯರು ಲೋಕಸಭೆಯಲ್ಲಿ ಪ್ರಸ್ತಾಪಿಸಿದಾಗ ಸಚಿವ ರಾಜ್ ನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ. ಸಮ್ಮಿಶ್ರ ಸರಕಾರ  ಉರುಳಿಸಲು ಬಿಜೆಪಿ ಷಡ್ಯಂತ್ರ  ನಡೆಸಿದೆ ಎಂದು ಆರೋಪಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು. 

ಕಾಂಗ್ರೆಸ್ ಸದಸ್ಯರ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಸ್ಪೀಕರ್ ಮಧ್ಯಾಹ್ನ 2 ಗಂಟೆಗೆ ಮುಂದೂಡಿದ್ದಾರೆ.  

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...