ಒಡಿಶಾ ರೈಲು ದುರಂತ ಸುಳ್ಳು ಸುದ್ದಿ ಹರಡಿದ ಬಿಜೆಪಿ ಬೆಂಬಲಿಗ ವಕೀಲನ ಬಂಧನ

Source: SOnews | By Staff Correspondent | Published on 9th June 2023, 5:11 PM | National News |

ಚೆನ್ನೈ: ಒಡಿಶಾದ ಬಾಲಾಸೋರ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಬಿಜೆಪಿ ಬೆಂಬಲಿಗನೆಂದು ಗುರುತಿಸಲಾದ ವಕೀಲನೊಬ್ಬನನ್ನು ತಮಿಳುನಾಡು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ರೈಲು ಅಪಘಾತದ ನಂತರ ಬಹನಗ ಬಜಾರ್‌ ರೈಲು ನಿಲ್ದಾಣದ ಸ್ಟೇಷನ್‌ ಮಾಸ್ಟರ್‌ ಮೊಹಮ್ಮದ್‌ ಶರೀಫ್‌ ಅಹ್ಮದ್‌ ಎಂಬವರು ತಲೆಮರೆಸಿಕೊಂಡಿದ್ದಾರೆ ಹಾಗೂ ಅವರನ್ನು ಪ್ರಶ್ನಿಸಬೇಕು ಎಂಬ ಟ್ವೀಟ್‌ ಅನ್ನು ಕನ್ಯಾಕುಮಾರಿ ಜಿಲ್ಲೆಯ ತುಕ್ಕಲೈ ಎಂಬಲ್ಲಿನ ಸೆಂಥಿಲ್‌ ಕುಮಾರ್ ಎಂಬ ಈ ವ್ಯಕ್ತಿ  ಮಾಡಿದ್ದ.

ಆದರೆ ಅಪಘಾತ ಸಂಭವಿಸಿದ ಸಂದರ್ಭ ಸ್ಟೇಷನ್‌ ಸುಪರಿಂಟೆಂಡೆಂಟ್‌ ಆಗಿ ಎಸ್‌ ಬಿ ಮೊಹಂತಿ ಹಾಗೂ ಸ್ಟೇಷನ್‌ ಮಾಸ್ಟರ್‌ ಆಗಿ ಎಸ್‌ ಕೆ ಪಟ್ನಾಯಕ್‌ ಎಂಬವರಿದ್ದರು ಎಂದು ತಿಳಿದು ಬಂದಿತ್ತು. ಅಷ್ಟೇ ಅಲ್ಲದೆ ಈ ನಿಲ್ದಾಣದಲ್ಲಿ ಮೊಹಮ್ಮದ್‌ ಶರೀಫ್‌ ಅಹ್ಮದ್‌ ಹೆಸರಿನ ಯಾವುದೇ ಉದ್ಯೋಗಿ ಇರಲಿಲ್ಲ.

ದಿನೇಶ್‌ ಕುಮಾರ್ ಎಂಬ ಡಿಎಂಕೆ ಸದಸ್ಯ ಪೊಲೀಸ್‌ ದೂರು ಸಲ್ಲಿಸಿ ಧಾರ್ಮಿಕ ಒಡಕು ಮತ್ತು ದ್ವೇಷ ಹಬ್ಬಿಸಿ  ಈ ರೀತಿಯ ಸುಳ್ಳು ಸುದ್ದಿಯನ್ನು ಟ್ವಿಟರ್‌ನಲ್ಲಿ ಹರಡಲಾಗಿದೆ ಎಂದು ಆರೋಪಿಸಿದ್ದರು.

ತುಕ್ಕಲೈ ಪೊಲೀಸರು ಐಪಿಸಿ ಸೆಕ್ಷನ್‌ 153, 153ಎ, 505 (1) ಹಾಗೂ 505(2) ಅನ್ವಯ ಪ್ರಕರಣ ದಾಖಲಿಸಿ ವಕೀಲನನ್ನು ಬಂಧಿಸಿದ್ದಾರೆ.

ತನಿಖೆ ಮುಂದುವರಿದಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...