ಬಿಜೆಪಿಯವರ ಲೂಟಿ ಹಣದಿಂದ ರಾಜ್ಯದ ಅಭಿವೃದ್ಧಿ ಮಾಡಬಹುದಿತ್ತು. ದಾಂಡೇಲಿಯಲ್ಲಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ.

Source: SO News | By Laxmi Tanaya | Published on 29th April 2023, 8:47 PM | Coastal News | National News |

ದಾಂಡೇಲಿ : ಬಿಜೆಪಿಯವರು ಲೂಟಿ ಮಾಡಿದ ಹಣದಿಂದ ರಾಜ್ಯದ ಹಲವು ರಸ್ತೆ, ಶಿಕ್ಷಣ ಸಂಸ್ಥೆ, ಆರೋಗ್ಯ ಸಂಸ್ಥೆ ನಿರ್ಮಾಣ ಮಾಡಬಹುದಿತ್ತು ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಶನಿವಾರ  ದಾಂಡೇಲಿಯ ಡಿಎಪ್ಎ ಮೈದಾನದಲ್ಲಿ  ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು.,

ಕರ್ನಾಟಕದಲ್ಲಿ ಇಂದಿನವರೆಗೆ ಎರಡುವರೆ ಲಕ್ಷ ಕೋಟಿ ಹಣವನ್ನು ಬಿಜೆಪಿ ಸರಕಾರ ಜನರಿಂದ ಲೂಟಿ ಮಾಡಿದೆ.. ನಾವು ಭ್ರಷ್ಟಾಚಾರ, ಲೂಟಿ ಓಪನ್ನಾಗೇ ನಡೆಸ್ತೇವೆ ಎಂದು ಬಿಜೆಪಿ ಮುಖಂಡರು ಹೇಳುತ್ತಾರೆಂದ ಅವರು,  ಇಂದಿನ ರಾಜಕೀಯ ದಾರಿ ತಪ್ಪಿಸುವ ರಾಜಕೀಯವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಯಾವ ವಿಷಯ ತರಬೇಕೆಂದು ಬಿಜೆಪಿಯವರು ಕಾಯುತ್ತಿರುತ್ತಾರೆ. ಯಾರು ಜನರ ಅಭಿವೃದ್ಧಿಗಾಗಿ ಶ್ರಮ ವಹಿಸ್ತಾರೆ, ಯಾರು ತಮ್ಮ ಸ್ವಾರ್ಥಕ್ಕಾಗಿ ಮಾತನಾಡ್ತಾರೆ  ಎಂದು ಜನರಿಗೆ ತಿಳಿದಿದೆ ಎಂದರು.

 ಕರ್ನಾಟಕದ ಜನರು ಆಡಳಿತ ಚುಕ್ಕಾಣಿ ನಮಗೆ ನೀಡಿ ಎಂದು ಬಿಜೆಪಿಯವರು ಹೇಳ್ತಾರೆ. ಕಳೆದ ಮೂರುವರೆ ವರ್ಷದಿಂದ ರಾಜ್ಯದಲ್ಲಿ ಯಾರ ಸರಕಾರವಿತ್ತು..? ಎಂದು ಪ್ರಶ್ನಿಸಿದ ಪ್ರಿಯಾಂಕ, ಇಂದು ಪ್ರತಿಯೊಂದರ ಬೆಲೆ ಏರಿದ್ದು, ಆಹಾರ, ಶಿಕ್ಷಣ ಪ್ರತಿಯೊಂದರ ಬೆಲೆ ಗಗನಕ್ಕೇರಿದೆ. ಸರಕಾರದ ಎರಡೂವರೆ ಲಕ್ಷ ಉದ್ಯೋಗಗಳು ಇಂದಿಗೂ ಖಾಲಿಯಿವೆ.. ರೈತರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ರೈತ ಬೆಳೆಗಳಿಗೂ ಜಿಎಸ್‌ಟಿ ಕಾಟ. ಎಲ್ಲಿಯೂ ಉತ್ತಮ ಆಸ್ಪತ್ರೆಗಳನ್ನು ಕೂಡಾ ನಿರ್ಮಾಣ ಮಾಡಲಾಗಿಲ್ಲ. ಜನರಿಗೆ ಉಚಿತ ಅಕ್ಕಿ ನೀಡುವ ಯೋಜನೆ ಪ್ರಾರಂಭಿಸಿದ್ದೇವೆ.. 

ನಾನೇನು ಮಾಡಿಲ್ಲ, ಆದರೆ ಇಂದಿರಾ ಗಾಂಧಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ.. ಹಿರಿಯರು ಇಂದಿಗೂ ನನ್ನನ್ನು ಭೇಟಿಯಾದಾಗ ಇಂದಿರಾ ಗಾಂಧಿಯವರನ್ನು ನೆನಪು ಮಾಡಿಕೊಳ್ತಾರೆ. ನಾನು ನನ್ನ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡ್ತೇನೆ, ನನ್ನಂತೆ ಜನಸಾಮಾನ್ಯರು ಕೂಡಾ ಜೀವನ ನಡೆಸ್ತಾರೆ. ಯಾರಿಂದ ಬೆಲೆ ಏರಿಕೆ ಕಡಿಮೆಯಾಗ್ತದೆ, ಭ್ರಷ್ಟಾಚಾರ ಕಡಿಮೆಯಾಗ್ತದೆ, ಉದ್ಯೋಗ, ಭವಿಷ್ಯ ದೊರೆಯುತ್ತದೆ ಎಂದು ನಿರ್ಧರಿಸಿ. ನಾರಾಯಣ ಗುರು, ಬಸವಣ್ಣ ಹುಟ್ಟಿದ ನಾಡಿನ ಜನರು ಸತ್ಯದ ಮಾರ್ಗದಲ್ಲಿ ಸಾಗಿ, ನೈಜತೆ ಅರಿತುಕೊಳ್ಳಿ.. ಬಿಜೆಪಿ ಸರಕಾರ ಕರ್ನಾಟಕದಲ್ಲಿ ಮಹಿಳೆಯರಿಗಾಗಿ 24 ಯೋಜನೆಯ ಆಶ್ವಾಸನೆ ನೀಡಿ, 2 ಮಾತ್ರ ಜಾರಿಗೊಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 


ಕರ್ನಾಟಕವನ್ನು ಸದೃಢಗೊಳಿಸಲು ಈ ಬಾರಿ ರಾಜ್ಯದಲ್ಲಿ ಬದಲಾವಣೆ ತನ್ನಿ. ರಾಜ್ಯದಲ್ಲಿ ಬಿಜೆಪಿಯ ಲೂಟಿ ತಡೆದು ನಿಮ್ಮ ಸಂಪತ್ತು ನಿಮ್ಮ ಪಾಲಿಗೆ ಸಿಗುವಂತಾಗಬೇಕಿದೆ. ಈ ಬಾರಿ ಯಾವ ಪಕ್ಷ ಜನಪರವಾಗಿದೆ, ಯಾವುದು ವಿರುದ್ಧವಾಗಿದೆ ಎಂದು ನೋಡಿಕೊಂಡು ಮತಹಾಕಿ. ಕರ್ನಾಟಕಕ್ಕೆ ಜೈ, ದೇಶಪಾಂಡೆ ಅವರಿಗೆ ಮತ ನೀಡಿ ಎಂದು ಪ್ರಿಯಾಂಕಾ ಮನವಿ ಮಾಡಿದರು. 

ಮಿನಿ ಇಂಡಿಯಾ ವರ್ಣಿಸಿದ ಪ್ರಿಯಾಂಕಾ : ದಾಂಡೇಲಿಯನ್ನ ಮಿನಿ ಇಂಡಿಯಾವೆಂದು ವರ್ಣಿಸಿದ ಅವರು, ಪ್ರಕೃತಿಗೆ ಮಾರುಹೋಗಿದ್ದೇನೆಂದರು.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...