ಪಶ್ಚಿಮ ಪದವಿಧರ ಕ್ಷೇತ್ರದಲ್ಲಿ ಮತ್ತೊಮ್ಮೆ ಭರ್ಜರಿ ವಿಜಯ ಸಾಧಿಸಿದ ಬಿಜೆಪಿಯ ಎಸ್ ವಿ ಸಂಕನೂರು.

Source: SO News | By Laxmi Tanaya | Published on 10th November 2020, 10:39 PM | State News |

ಧಾರವಾಡ:  ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ನಾಲ್ಕನೇ ಹಾಗೂ  ಅಂತಿಮ ಸುತ್ತಿನ   ಮತಗಳ ಎಣಿಕೆ ಪೂರ್ಣಗೊಂಡಿದ್ದು ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಅವರಿಗೆ  - 23857 ಮತ ಬಿದ್ದರೇ, ಕಾಂಗ್ರೆಸ್ ಅಭ್ಯರ್ಥಿ ಆರ್ ಎಂ ಕುಬೇರಪ್ಪನವರು 6188 ಮತ ಪಡೆದಿದ್ದಾರೆ. ಇನ್ನೂ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ  6188 ಪಡೆಯುವಲ್ಲಿ ಶಕ್ತರಾಗಿದ್ದಾರೆ.‌ ಒಟ್ಟು  52041 ಮತಗಳು ಚಲಾವಣೆಯಾಗಿದ್ದು,  8772 ಮತಗಳು ಅಸಿಂಧುವಾಗಿದೆ.

 ಕರ್ನಾಟಕ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ  ವಿಜೇತ ಅಭ್ಯರ್ಥಿ ಎಸ್.ವಿ.ಸಂಕನೂರ ಅವರಿಗೆ ಚುನಾವಣಾ ವೀಕ್ಷಕರಾಗಿರುವ , ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಚುನಾವಣಾಧಿಕಾರಿಯಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಮಾಣ ಪತ್ರ ನೀಡಿದರು.

ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್,ಗದಗ ಜಿಲ್ಲಾಧಿಕಾರಿ ಸುಂದರೇಶಬಾಬು, ಉತ್ತರ ಕನ್ನಡ ಜಿಲ್ಲಾಧಿಕಾರಿ ಹರೀಶಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...