ಕಾನೂನು ಪಾಲನೆಯಿಂದ ನೆಮ್ಮದಿ ಜೀವನ - ಸಂತೋಷ್ ಗಜಾನನ ಭಟ್.

Source: sonews | By Staff Correspondent | Published on 12th December 2019, 7:27 PM | State News | Don't Miss |

ಕೋಲಾರ: ದಿನ ನಿತ್ಯದ ಜೀವನದಲ್ಲಿ ಕಾನೂನುಗಳನ್ನು ಪಾಲಿಸುವ ಮೂಲಕ ಸುಖ ಶಾಂತಿ ನೆಮ್ಮದಿಯನ್ನು ಕಾಣಲು ಮುಂದಾಗಬೇಕು ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಜೈಲು ವಾಸಿಗಳಿಗೆ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘದಿಂದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಚಾರಣಾಧೀನ ಖೈದಿಗಳಿಗೂ ಹಲವಾರು ಹಕ್ಕುಗಳಿದ್ದು, ಇದನ್ನು ಸಮರ್ಥವಾಗಿ ಬಳಸಿಕೊಂಡು ಗುಣಮಟ್ಟ ಜೀವನ ನಡೆಸಬೇಕು. ತ್ವರಿತವಾಗಿ ವಿಚಾರಣೆ ನಡೆಸಿ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸಬೇಕು ಎಂಬ ಕಾನೂನನ್ನು ಸಮರ್ಥವಾಗಿ ಅನುಷ್ಠಾನಗೊಳಿಸಲು ನ್ಯಾಯಾಂಗ ಶಕ್ತಿ ಮೀರಿ ಶ್ರಮಿಸುತ್ತಿದೆ. ಯಾವುದೇ ಒಂದು ಕ್ಷಣದ ನಿರ್ಧಾರದಿಂದ ತಪ್ಪಾಗಿ ಹೋಗಿದ್ದು,  ಹೀಗಾಗಿ ಕಾನೂನನ್ನು ಬಳಸಿಕೊಂಡು ಜೈಲಿನಿಂದ ಹೊರ ಹೋಗುವ ಮೂಲಕ ಉನ್ನತ ಜೀವನ ನಡೆಸಬೇಕೆಂದು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಹೆಚ್ ಗಂಗಾಧರ್ ಅವರು ಮಾತನಾಡಿ ಒಂದು ಅಪರಾಧಕ್ಕೆ ಒಂದೇ ಶಿಕ್ಷೆ ಎಂದು ಸಂವಿಧಾನ ಹೇಳಿದೆ ಹೀಗಾಗಿ ನ್ಯಾಯಾಲಯವು ಸಹ ಇದನ್ನೇ ಅನುಮೋದಿಸುತ್ತಿದೆ ಎಂದ  ಅವರು ಬಡ ವಿಚಾರಣಾ ಬಂಧಿಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ವಕೀಲರ ಸೇವೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಕೆ.ಎನ್ ಮೋಹನ್ ಕುಮಾರ್ ಅವರು ಮಾತನಾಡಿ ಜೈಲಿಗೆ ಬಂದ ತಕ್ಷಣ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು, ಸಂಬಂಧಿಕರ ಜೊತೆ ಮಾತನಾಡುವುದು ಮತ್ತು ಮುಂದಿನ ಕೇಸಿನ ದಿನಾಂಕ ತಿಳಿದುಕೊಳ್ಳುವ ಹಕ್ಕು ಬಂಧಿಗಳಿಗೆ ಇದೆ ಎಂದು ಮಾಹಿತಿ ನೀಡಿದರು.

ವಕೀಲ ಸಂಘದ ಅಧ್ಯಕ್ಷರಾದ ಟಿ.ಆರ್. ಜಯರಾಮ್ ಅವರು ಮಾತನಾಡಿ ಬಂಧಿಗಳು ತಮ್ಮ ಈಗಿನ ಪರಿಸ್ಥಿತಿ ಕುರಿತಂತೆ ಚಿಂತೆ ಮಾಡುವುದನ್ನು ಬಿಟ್ಟು ಜೈಲಿನಿಂದ ಹೊರಗೆ ಹೋದ ನಂತರ ಉತ್ತಮ ಮಾರ್ಗದಲ್ಲಿ ನಡೆಯುವ ಮೂಲಕ ಸಾರ್ಥಕ ಬದುಕನ್ನು ಸಾಗಿಸಬೇಕು. ಯಾವುದೇ ಕೆಲಸ ಮಾಡುವ ಮುನ್ನ ಹತ್ತಾರು ಬಾರಿ ಚಿಂತನೆ ಮಾಡಿ ಎಲ್ಲವನ್ನು ಕಾನೂನು ವ್ಯಾಪ್ತಿಯಲ್ಲಿ ಮುಗಿಸಬೇಕು.  ಸಮಸ್ಯೆಗಳು ಬಂದಾಗ ಪರಸ್ಪರ ಚರ್ಚೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...