ಜೆಸಿಐ ಭಟ್ಕಳ ಸಿಟಿ ಮತ್ತು ಕರಾವಳಿ ಕಾವಲು ಪಡೆ ಆಶ್ರಯದಲ್ಲಿ ರಕ್ತದಾನ ಶಿಬಿರ

Source: S.O. News Service | Published on 12th September 2020, 7:29 PM | Coastal News | Don't Miss |

ಭಟ್ಕಳ:ತಾಲುಕಿನ‌ ಜೆಸಿ ಸಪ್ತಾಹ 2020 ಇದರ ಅಂಗವಾಗಿ ಇಂದು ಜೆಸಿಐ ಭಟ್ಕಳ ಸಿಟಿ,  ಜೆಸಿಐ ಭಟ್ಕಳ ಚೇತನ ಹಾಗೂ ಕರಾವಳಿ ಕಾವಲು ಪೊಲೀಸ್ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಇಲ್ಲಿನ ಕಮಲಾವತಿ ರಾಮನಾಥ ಶ್ಯಾನಭಾಗ ಸಭಾಭವನದಲ್ಲಿ ನಡೆಯಿತು.
ಸಭಾ ಕಾರ್ಯಕ್ರಮಗಳನ್ನು ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್ಐ ಅಣ್ಣಪ್ಪ ಮೊಗೇರ, ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಅಪಘಾತ ಸೇರಿ ಇತರ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚು ಇರುತ್ತದೆ. ಈ ಹಿನ್ನೆಲೆಯಲ್ಲಿ ರಕ್ತ ಸಂಗ್ರಹಿಸಿಡಲು ಆರೋಗ್ಯವಂತ ವ್ಯಕ್ತಿಗಳು ಸಹಕಾರ ನೀಡಬೇಕು. ಶಿಬಿರಗಳಲ್ಲಿ ಭಾಗವಹಿಸಿ ರಕ್ತದಾನ ಮಾಡುವುದರಿಂದ ತುಂಬಾ ಉಪಯುಕ್ತವಾಗುತ್ತದೆ ಎಂದರು.ಶಿಬಿರದಲ್ಲಿ 50 ಯೂನಿಟ್ ರಕ್ತವನ್ನು ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಜೆಸಿಐ ಭಟ್ಕಳ ಸಿಟಿ ಅಧ್ಯಕ್ಷರಾದ ಜೆಸಿ ಸುರೇಶ ಪೂಜಾರಿ, ಪೂರ್ವಾಧ್ಯಕ್ಷರಾದ ಜೆಸಿ ರಮೇಶ ಖಾರ್ವಿ,ಜೆಸಿಐ ಭಟ್ಕಳ ಚೇತನ ಅಧ್ಯಕ್ಷರಾದ ಶ್ರೀಮತಿ ರೂಪ ರಮೇಶ ಖಾರ್ವಿ, ಜೆಸಿಐ ವಲಯ ೧೫ ರ ಜಿ& ಡಿ ನಿರ್ದೇಶಕರಾದ ಸೆನೆಟರ್ ಅಬ್ದುಲ್ ಜಬ್ಬರ್ ಸಾಹೇಬ್, ಅತಿಥಿಗಳಾದ ಮಂಜುನಾಥ ಖಾರ್ವಿ,ಉಡುಪಿ ಜಿಲ್ಲಾಸ್ಪತ್ರೆಯ ವೈದ್ಯಪ್ರಮುಖರಾದ ಶ್ರೀಮತಿ ವೀಣಾ ಕುಮಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜೆಸಿಐ ಸದಸ್ಯರು ಹಾಗೂ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೆರಲು ಸಹಕರಿಸಿದರು. ಈ ಸಂದರ್ಭದಲ್ಲಿ ಜೆಸಿಐ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ ವಿತರಿಸಲಾಯಿತು. ಸದಸ್ಯರಾದ ನಾಗರಾಜ ಮೊಗೇರ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಜೆಸಿಐ ಭಟ್ಕಳ ಸಿಟಿ ಕಾರ್ಯದರ್ಶಿ ಪಾಂಡುರಂಗ ನಾಯ್ಕ ವಂದನಾರ್ಪಣೆ ಮಾಡಿದರು.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...