ಮಹಾಸತಿ ಸೇವಾ ಸಂಘ ಗೊರ್ಟೆ,ಇಂಡಿಯನ್ ರೆಡ್ ಕ್ರಾಸ್ ಸಹಯೋಗದಲ್ಲಿ ರಕ್ತದಾನ ಶಿಬಿರ 

Source: S.O. News Service | By MV Bhatkal | Published on 7th July 2019, 8:18 PM | Coastal News | Don't Miss |

ಭಟ್ಕಳ:ಪರ್ಯಾಯ ವಯವಸ್ಥೆ ಇಲ್ಲದ ದಾನವೆಂದರೆ ರಕ್ತದಾನ ಮಾತ್ರ. ಒಂದು ಜೀವನ ಉಳಿಸಬಲ್ಲ ಶಕ್ತಿ ಇರುವದು ರಕ್ತದಾನಕ್ಕೆ ಮಾತ್ರ ಎಂದು ಕರಾವಳಿ ಕಾವಲು ಪಡೆಯ ಪೊಲೀಸ್ ನೀರೀಕ್ಷಕ ಸುರೇಶ ಜಿ. ನಾಯಕ ಹೇಳಿದರು.
ಅವರು ಭಾನುವಾರ ಗೊರ್ಟೆಯ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶ್ರೀ ಮಹಾಸತಿ ಸೇವಾ ಸಂಘ ಗೊರ್ಟೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಬ್ಲಡ್ ಬ್ಯಾಂಕ್ ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ಮಹಾಸತಿ ಸೇವಾ ಸಂಘದ ಅಧ್ಯಕ್ಷ ಜಯಂತ ಎಂ ಮೊಗೇರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೀರೇಂದ್ರ ಕುಮಾರ, ಸ್ತ್ರೀ ರೋಗ ತಜ್ಞೆ ಡಾ. ವಿನಿತಾ ನಾಯಕ, ಪಾಂಡುರಂಗ ಜಿ. ನಾಯ್ಕ, ರಾಘವೇಂದ್ರ ನಾಯ್ಕ, ಪಾಂಡುರಂಗ ಅಳ್ವಗದ್ದೆ, ಮೋಹನ ನಾಯ್ಕ, ಪಾರ್ವತಿ ಎಂ ಮೊಗೇರ, ಸರಸ್ವತಿ ನಾಯ್ಕ, ಕೃಷ್ಣ ಮೊಗೇರ, ರಾಮ ಎಂ ನಾಯ್ಕ ಇದ್ದರು. 
ಕರವಾಳಿ ಕಾವಲು ಪಡೆಯ ಪೊಲೀಸ್ ನೀರೀಕ್ಷಕ ಸುರೇಶ ಜಿ. ನಾಯಕ ಅವರ ಕುಟುಂಬ, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಸೇರಿದಂತೆ ಸ್ಥಳೀಯ ಸಂಘಗಳ ಸದಸ್ಯರು, ಸಾರ್ವಜನಿಕರು ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು. ಒಟ್ಟು 104 ಬಾಟಲ್ ರಕ್ತವನ್ನು ಸಂಗ್ರಹಿಸಲಾಯಿತು.ಈಶ್ವರ ಮೊಗೇರ ಕಾರ್ಯಕ್ರಮ ನಿರ್ವಹಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...