ರಕ್ತದಾನದಿಂದ ಜೀವದಾನ : ಡಾ.ಮಧುಸೂದನ್ ನಾಯಕ್

Source: so news | By MV Bhatkal | Published on 15th June 2019, 9:43 PM | Coastal News | Don't Miss |

ಉಡುಪಿ : ಒಬ್ಬ ವ್ಯಕ್ತಿ ನೀಡಿದ ರಕ್ತದಿಂದ ಕನಿಷ್ಠ ನಾಲ್ಕು ಜೀವವನ್ನು ಉಳಿಸಬಹುದು. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಕೆಟ್ಟ ಪರಿಣಾಮವಾಗುವುದಿಲ್ಲಎಂದು ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಮಧುಸೂದನ್ ನಾಯಕ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ಜಯಲಕ್ಷ್ಮೀ ಸಿಲ್ಕ್ಸ್, ಜಯಲಕ್ಷ್ಮೀ ಆರ್ಕೇಡ ಉದ್ಯಾವರ, ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರ ಜ್ಞಾನ ಸಾಧನಾ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯಾವರದಜ್ಞಾನ ಸಾಧನಾಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆದ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನ ಎಷ್ಟೇ ಮುಂದುವರಿದಿದ್ದರೂ ಕೃತಕವಾಗಿ ರಕ್ತ ತಯಾರಿಸಲು, ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಂದಿಗೂ ಕಂಡುಕೊಳ್ಳಲು ಸಾಧ್ಯವಾಗಿಲ್ಲ.ದಾನಿಗಳು ನೀಡಿದ ರಕ್ತವನ್ನು 35 ದಿನಗಳ ಕಾಲ ಮಾತ್ರ ಸಂಗ್ರಹಿಸಿಡಬಹುದು. ಪ್ಲಾಟಿಲೇಟ್ಸ್ 5 ದಿನಗಳ ಕಾಲ ಮಾತ್ರ ಇಡಬಹುದು.ಯುವ ಜನತೆ ಹೆಚ್ಚಾಗಿ ರಕ್ತದಾನಿಗಳಾಗಿ ಎಂದು ಹೇಳಿದರು. 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉದ್ಯಾವರ ಜ್ಞಾನ ಸಾಧನ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ಜೋನ್ ಎಂ.ಡಿಸೋಜ ಮಾತನಾಡಿ, ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ರಕ್ತದಾನದಿಂದ ಹೆಚ್ಚು ಹೆಚ್ಚು ಜೀವಗಳನ್ನು ಉಳಿಸಬಹುದು. ರಕ್ತದಾನದಿಂದ ಒಂದು ಜೀವ ಉಳಿಸುವುದೇ ನಾವು ಮಾಡುವ ಶ್ರೇಷ್ಠದಾನ. ಅರ್ಹದಾನಿಗಳು ವರ್ಷಕ್ಕೆ ಒಂದೆರಡು ಬಾರಿಯಾದರೂ ರಕ್ತದಾನ ಮಾಡಿ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್ರಾವ್ ಮಾತನಾಡಿ, ಜಿಲ್ಲೆಯಲ್ಲಿ ಗರ್ಭಿಣಿಯರಲ್ಲಿ ಶೇ.50ರಷ್ಟು ರಕ್ತ ಹೀನತೆ ಸಮಸ್ಯೆ ಇಂದಿಗೂ ಕಂಡು ಬರುತ್ತಿದೆ, ಆಹಾರ ಮತ್ತು ಔಷಧಿ ಸೇವಿಸಿ ರಕ್ತಹೀನತೆ ಆಗದಂತೆ ಗಮನ ಹರಿಸಬೇಕು. ಆಕ್ಸಿಡೆಂಟ್ ಆದಂತಹ ಸಂದರ್ಭಜಲ್ಲಿಯೇ ಅತೀ ಹೆಚ್ಚಾಗಿ ರಕ್ತದ ಅವಶ್ಯಕತೆ ಇರುವುದು. ಆದ್ದರಿಂದ ವಾಹನ ಚಲಾಯಿಸುವಾಗ ಯುವ ಜನತೆ ಜಾಗರೂಕರಾಗಿರಬೇಕು ಎಂದು ಹೇಳಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ ರಕ್ತದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಂದು ನಿಮಿಷ ಒಬ್ಬ ವ್ಯಕ್ತಿಗೆ ರಕ್ತದ ಅವಶ್ಯಕತೆ ಇರುತ್ತದೆ ಜಿಲ್ಲೆಯಲ್ಲಿ 3 ರಕ್ತದ ಅಧಿಕೃತ ನಿಧಿಗಳಿವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. ರಕ್ತದಾನ ಮಾಡಿದಲ್ಲಿ ಅದು ಕೂಡ ಸಮಾಜಸೇವೆ ಮಾಡಿದ ಹಾಗೆ, ಯುವ ಜನತೆ ಹೆಚ್ಚು ಹೆಚ್ಚು ರಕ್ತದಾನ ಮಾಡಿ ಎಂದು ಹೇಳಿದರು. 
ವಿದ್ಯಾರ್ಥಿಗಳು 4ತಿಂಗಳಿಗೆ ಒಮ್ಮೆ ಆದರೂ ರಕ್ತದಾನ ಮಾಡಿ ಜೀವ ಉಳಿಸಲು ಸಹಕಾರಿಯಾಗಬೇಕು ಎಂದು ರಕ್ತದಾನಿ ಹೆಬ್ರಿಯ ನರಸಿಂಹ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.
ರಕ್ತದಾನಿಗಳಿಗೆ ಸನ್ಮಾನದ ಅಗತ್ಯವಿಲ್ಲ, ರಕ್ತದಾನದಿಂದ ಒಂದು ಜೀವ ಉಳಿದರೆ ಅದೇ ರಕ್ತದಾನಿಗೆ ಸನ್ಮಾನ. ಯುವ ಜನತೆ ಹೆಚ್ಚು ರಕ್ತದಾನ ಮಾಡಿ ಜೀವ ಉಳಿಸುವ ಕೆಲಸ ಮಾಡಿ ಎಂದು ಕಾರ್ಕಳದ ರಕ್ತದಾನಿ ಶೈಲೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.
ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ 6 ಮಂದಿ ದಾನಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ರಕ್ತದಾನ ಮತ್ತು ಸುರಕ್ಷಿತ ರಕ್ತ ವಿಷಯದ ಕುರಿತು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ವಿಶೇಷ ಉಪನ್ಯಾಸ ಮಾಡಿದರು.
ಉದ್ಯಾವರ ಜ್ಞಾನ ಸಾಧನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದಕಾಲೇಜಿನ ಜೆಟಿಒ ನಾಗೇಂದ್ರ ಕುಮಾರ್ ಸ್ವಾಗತಿಸಿದರು, ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...