ಅಗತ್ಯ ಸೇವೆಗೆ ಮಾತ್ರ ಬಿ.ಎಂ.ಟಿ.ಸಿ. : ಡಿ.ಸಿ.ಎಂ ಸವದಿ

Source: sonews | By Staff Correspondent | Published on 26th March 2020, 7:13 PM | State News |

ಬೆಂಗಳೂರು: ಇಂದಿನಿಂದ ಅಗತ್ಯ ಸೇವೆ ನೀಡುವವರಿಗಾಗಿ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳು    ಕಾರ್ಯನಿರ್ವಹಿಸಲಿವೆ.
 
ಇಂದಿನಿಂದ ಬಿಎಂಟಿಸಿ ಸೇವೆ ಇರೋದು ಜನಸಾಮಾನ್ಯರಿಗಲ್ಲ... ಕೇವಲ ಅವಶ್ಯಕ ಸೇವೆಗಳ ನೌಕರರಿಗೆ ಮಾತ್ರ... ಜೊತೆಗೆ, ವೈದ್ಯರು, ದಾದಿಯರು, ಆಸ್ಪತ್ರೆ ನೌಕರರು, ಸೆಕ್ಯೂರಿಟಿ ಗಾರ್ಡ್ಗಳು, ಬ್ಯಾಂಕ್ ಉದ್ಯೋಗಿಗಳು, ಹಾಗೂ ಮಾಧ್ಯಮದವರಿಗೆ ಮಾತ್ರ ಈ ಬಿಎಂಟಿಸಿಯಲ್ಲಿ ಪ್ರಯಾಣಿಸಲು ಸಾಧ್ಯ.... ಯಾವುದೇ ಕಾರಣಕ್ಕೂ ಮನೆಯಿಂದ ಜನಸಾಮಾನ್ಯರು ಹೊರಗೆ ಬರಬೇಡಿ..

ಪ್ರತಿ ಬಸ್ಸಿನಲ್ಲಿ ಗರಿಷ್ಠ 20 ಜನ ಮಾತ್ರ ಪ್ರಯಾಣಿಸಬಹುದಾಗಿರುತ್ತದೆ. ಬಸ್ಸನ್ನು ಚಲಾಯಿಸುವ ಎಲ್ಲ ಚಾಲಕ ನಿರ್ವಹಕರುಗಳಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಕ್ತ    ನಿರ್ದೇಶನಗಳನ್ನು ನೀಡಲಾಗಿದೆ.

ಪ್ರತಿಯೊಂದು ವಾಹನದಲ್ಲಿ 20 ಕ್ಕಿಂತ ಮೀರದಂತೆ ಪ್ರಯಾಣಿಕರು.
ಪೊಲೀಸ್ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ, ಮೆಡಿಕಲ್ ಶಾಪ್, ಕಾರ್ಪೊರೇಷನ್, ಮೆಟ್ರೋ ಸಿಬ್ಬಂದಿ, ಖಾಸಗಿ ಸೆಕ್ಯೂರಿಟಿ ಗಾರ್ಡ್,ಬ್ಯಾಂಕ್ ಸಿಬ್ಬಂದಿ, ರಕ್ತ ದಾನಿಗಳು, ಅಲ್ಲದೆ ಆಸ್ಪತ್ರೆಗೆ ಭೇಟಿ ನೀಡುವ ನಾಗರೀಕರು, ರೋಗಿಗಳನ್ನು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಇವರಲ್ಲದೆ ಪೊಲೀಸ್ ಇಲಾಖೆಯಿಂದ ಪಾಸ್ ಪಡೆದಿರುವ ಅಂಗಡಿ ಕಾರ್ಮಿಕರು, ಡೆಲಿವರಿ ಹುಡುಗರು, ಪೆಟ್ರೋಲ್ ಬಂಕ್ ಸಿಬ್ಬಂದಿ, ಹೋಟೆಲ್ ಸಿಬ್ಬಂದಿಯನ್ನು ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದೆಲ್ಲೆಡೆ ಕೊರೊನ ಮಹಾಮಾರಿಯನ್ನು ತಡೆಯ್ಯುವ ಪ್ರಯುಕ್ತ ಲಾಕ್ ಡೌನ್  ಘೋಷಿಸಿದೆ.ಇದರ ನಡುವೆ ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಬಿಎಂಟಿಸಿ ಯ ಬಸ್ಸುಗಳನ್ನು ಕಾರ್ಯಾಚರಣೆ ಗೊಳಿಸಲಾಗುತ್ತಿದೆ. ಸದರಿ ಸೇವೆಯು ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸುವ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಈ ಸೇವೆ ಪಡೆಯಲು ಪೊಲೀಸ್ ಸಂಸ್ಥೆ ವಿತರಿಸಿರುವ ಗುರುತಿನ ಚೀಟಿ ಅತ್ಯಾವಶ್ಯವಾಗಿರುತ್ತದೆ
ದಯವಿಟ್ಟು ಸಾರ್ವಜನಿಕರು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಸಹಕರಿಸಬೇಕಾಗಿ ವಿನಂತಿ.

Read These Next

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ