ಉಡುಪಿ: ದೋಣಿ ಮುಗುಚಿ ಅಪಾರ ನಷ್ಟ; ಓರ್ವ ಮೀನುಗಾರನಿಗೆ ಗಾಯ

Source: S O News Service | By Staff Correspondent | Published on 26th August 2020, 5:13 PM | Coastal News |

ಉಡುಪಿ: ಮರವಂತೆ ಸಮುದ್ರದಲ್ಲಿ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ಪರಿಣಾಮ ಓರ್ವ ಮೀನುಗಾರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಅವಘಡದಲ್ಲಿ ಕಾಲಿಗೆ ತೀವ್ರವಾಗಿ ಗಾಯಗೊಂಡಿರುವ ದೋಣಿ ಮಾಲಕ ಗಂಗೊಳ್ಳಿಯ ಶ್ರೀನಿವಾಸ್ ಖಾರ್ವಿ (50) ಎಂಬವರು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ದೋಣಿಯಲ್ಲಿದ್ದ ಇತರ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಿವಾಸ ಖಾರ್ವಿ ಮಾಲಕತ್ವದ ‘ಆದಿ ಆಂಜನೇಯ’ ಹೆಸರಿನ ದೋಣಿ ಯಲ್ಲಿ ಶ್ರೀನಿವಾಸ ಖಾರ್ವಿ ಸೇರಿದಂತೆ ಒಟ್ಟು ನಾಲ್ವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಮರವಂತೆ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ದೋಣಿಯು ಅಲೆಗಳ ರಭಸಕ್ಕೆ ದಿಬ್ಬಕ್ಕೆ ಹೊಡೆದು ಮಗುಚಿ ಬಿತ್ತೆನ್ನಲಾಗಿದೆ.

ಕೂಡಲೇ ದೋಣಿಯಲ್ಲಿದ್ದ ನಾಲ್ವರು ಈಜಿ ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ. ಈ ವೇಳೆ ದೋಣಿಯು ಶ್ರೀನಿವಾಸ ಖಾರ್ವಿ ಅವರ ಕಾಲಿನ ಮೇಲೆ ಬಿತ್ತೆನ್ನಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ 24X7 ಅಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ವೇಳೆ ದೋಣಿಯ ಎರಡು ಇಂಜಿನ್‌ಗಳು ಸಮುದ್ರ ಪಾಲಾಗಿ ಅಪಾರ ನಷ್ಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...