ಪಣಂಬೂರಿನಲ್ಲಿ ಗಿಲ್ ನೆಟ್ ಬೋಟ್ ಅವಘಡ: ಓರ್ವ ಮೀನುಗಾರ ಸಮುದ್ರಪಾಲು ನಾಲ್ಕು ಮಂದಿಯ ರಕ್ಷಣೆ

Source: vb news | By MV Bhatkal | Published on 11th September 2021, 7:27 PM | Coastal News | Don't Miss |

ಮಂಗಳೂರು:ಮೀನುಗಾರಿಕೆಗೆ ತೆರಳಿದ್ದ ಗಿಲ್‌ನೆಟ್ ಬೋಟ್‌ವೊಂದು ಭಾರೀ ಬಿರುಗಾಳಿಗೆ ಸಿಲುಕಿದ ಪರಿಣಾಮ ಒಬ್ಬ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ಪಣಂಬೂರು ಬೀಚ್ ಬಳಿ ನಡೆದಿದೆ.‌
ನಾಪತ್ತೆಯಾದ ಮೀನುಗಾರರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಈ ತಂಡದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಅಝರ್ ಎಂಬವರ ಮಾಲಕತ್ವದ ಗಿಲ್‌ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಈ ವೇಳೆ ಬೆಳಗ್ಗೆ ಸುಮಾರು 7:30ಕ್ಕೆ ಈ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...