ಪುಸ್ತಕಗಳೇ ನಿಜವಾದ ಸಂಗಾತಿ : ಝಮೀರುಲ್ಲಾ ಷರೀಫ್

Source: S.O. News Service | Published on 21st September 2019, 10:08 PM | Coastal News | Don't Miss |

ಭಟ್ಕಳ: ಪುಸ್ತಕಗಳೇ ನಮಗೆ ನಿಜಾದ ಸಂಗಾತಿ ಎಂದು ಸಾಹಿತಿ ಝಮೀರುಲ್ಲ ಷರೀಫ ನುಡಿದರು.
 ಅವರು ಇಲ್ಲಿನ ಜಾÐನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ಬಿ.ಪಿ.ಶೀವಾನಂದ ರಾವ್ ಅವರ ಬಿಡಿ ಬರಹಗಳ ಸಂಕಲನ ಹಕೀಕತ್ತು ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಾಹಿತ್ಯದ ಓದು ವ್ಯಕ್ತಿಯನ್ನು ಸಂಸ್ಕರಿಸುತ್ತದೆ. ಭಾವಿ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳು ಓದುವ ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮಕ್ಕಳು ಹೆಚ್ಚು ಓದುವಂತೆ ಪ್ರೇರೇಪಿಸಬೇಕು ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ ಆರ್ ನರಸಿಂಹ ಮೂರ್ತಿ ಮಾತನಾಡಿ, ಸಾಹಿತಿಗಳ ಕೃತಿ ಮತ್ತು ಬದುಕಿನ ಅವಲೋಕನ ಮಾಡಿದಾಗ, ನಮ್ಮಲ್ಲಿ ವೈಚಾರಿಕತೆ ಮೂಡುತ್ತದೆ. ಮಾನಸಿಕ ವಿಕಾಸಕ್ಕೂ ಸಹಾಯಕವಾಗುತ್ತದೆ. ಪ್ರಶಿಕ್ಷಕರು ಸಾಹಿತ್ಯಿಕ ಕೃತಿಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ತಾಲೂಕಾ ಕಸಾಪ ವತಿಯಿಂದ ಬಿ.ಪಿ.ಶಿವಾನಂದರಾವ ಅವರನ್ನು ಸನ್ಮಾನಿಸಲಾಯಿತು. ಕೃತಿಕಾರ ಬಿ.ಪಿ.ಶಿವಾನಂದ ಮಾತನಾಡಿದರು. ಸಾಹಿತಿ ಶ್ರೀಧರ ಶೇಟ್ ಕೃತಿಪರಿಚಯ ಮಾಡಿದರು. ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಸ್ವಾಗತಿಸಿ ಆಶಯ ನುಡಿಗಳನ್ನಾಡಿದರು. ಸುಮಂಗಲಾ, ಮಣಿರತ್ನಾ, ವೇದಾ, ಸುಮಿತ್ರಾ, ಪರಮೇಶ್ವರಿ ನಿತ್ಯೋತ್ಸವ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಶಿಕ್ಷಣಾರ್ಥಿ ಚಂದ್ರಪ್ರಭಾ ಕೊಡಿಯಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಾಹಿತಿ ನಾರಾಯಣ ಯಾಜಿ, ಕಸಾಪ ಗೌರವ ಕಾರ್ಯದರ್ಶಿ ಗಣೇಶ ಯಾಜಿ, ಕೃಷ್ಣ ಮೊಗೇರ, ಉಪನ್ಯಾಸಕ ವೃಂದದವರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...