ಚುನಾವಣಾ ಆಯೋಗದ ಆದೇಶ; ಶಿಂದೆ ಬಣ ಅಧಿಕೃತ 'ಶಿವಸೇನೆ'; ಬಿಲ್ಲು-ಬಾಣ ಚಿಹ್ನೆ ಬಳಸಲು ಸಮ್ಮತಿ | ಉದ್ಧವ್ ಗೆ ತೀವ್ರ ಮುಖಭಂಗ

Source: Vb | By I.G. Bhatkali | Published on 19th February 2023, 4:32 AM | National News |

ಹೊಸದಿಲ್ಲಿ: ಶಿವಸೇನೆಯ ಏಕನಾಥ್ ಶಿಂದೆ ಬಣಕ್ಕೆ ಪಕ್ಷದ ಅಧಿಕೃತ ಹೆಸರು ಹಾಗೂ 'ಬಿಲ್ಲು-ಬಾಣ' ಚಿಹ್ನೆಯನ್ನು ಉಳಿಸಿಕೊಳ್ಳಲು ಚುನಾವಣಾ ಆಯೋಗ ಶುಕ್ರವಾರ ಆದೇಶ ನೀಡಿದೆ. ಇದರಿಂದ ಉದ್ದವ ಠಾಕ್ರೆ ಬಣಕ್ಕೆ ತೀವ್ರ ಮುಖಭಂಗ ಉಂಟಾಗಿದೆ.

ಉದ್ಧವ್‌ ಠಾಕ್ರೆ ನೇತೃತ್ವದ ಬಣಕ್ಕೆ ನೀಡಲಾದ ಮಧ್ಯಂತರ ಹೆಸರು ಶಿವಸೇನೆ ಯುಬಿಟಿ ಹಾಗೂ ಚುನಾವಣಾ ಚಿಹ್ನೆಯಾಗಿ ಉರಿಯುವ ದೊಂದಿಯನ್ನು ಉಳಿಸಿಕೊಳ್ಳಬಹುದು ಎಂದು ಚುನಾವಣಾ ಆಯೋಗ ಘೋಷಿಸಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕಸ್ಟಾ ಪೇಶ್ ಹಾಗೂ ಚಿಂಚಾಡ-ಈ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ಫೆಬ್ರವರಿ 26ರಂದು ಉಪ ಚುನಾವಣೆ ನಡೆಯಲಿದ್ದು, ಅದಕ್ಕಿಂತ ಮುನ್ನ ಚುನಾವಣಾ ಆಯೋಗದ ಈ ಆದೇಶ ಹೊರ ಬಿದ್ದಿದೆ. ಉಭಯ ಬಣಗಳೂ ತಾವು ನಿಜವಾದ ಶಿವಸೇನೆ ಎಂದು ಪರಸ್ಪರ ಸಂಘರ್ಷದಲ್ಲಿ ತೊಡಗಿದ್ದವು. ಕಳೆದ ವರ್ಷ ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ವಿರುದ್ಧ ಬಂಡಾಯ ಎದ್ದ ಬಳಿಕ ಏಕನಾಥ್ ಶಿಂದೆ ಪಕ್ಷದ ಕುರಿತು ಹಕ್ಕು ಮಂಡಿಸಿದ್ದರು. ತಮ್ಮದು ನಿಜವಾದ ಶಿವಸೇನೆ ಹಾಗೂ ಪಕ್ಷದ ಚುನಾವಣಾ ಚಿಹ್ನೆಯನ್ನು ತಮಗೆ ನೀಡಿ ಎಂದು ಪ್ರತಿಪಾದಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.

ಈ ನಿರ್ಧಾರವನ್ನು ಶಿಂದೆ ಬಣ ಸ್ವಾಗತಿಸಿದರೆ ಠಾಕ್ರೆ ನೇತೃತ್ವದ ಬಣ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ನ್ಯಾಯಾಲಯದ ಮೆಟ್ಟಿಲೇರುವುದಾಗಿ ತಿಳಿಸಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...