ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ

Source: SO News | By Laxmi Tanaya | Published on 18th January 2022, 9:10 PM | Coastal News | Don't Miss |

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇಂದ್ರ ಸರಕಾರ ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಂಗಳವಾರ ಕಾಲ್ನಡಿಗೆ ಜಾಥಾ ನಡೆಸಿತು.

ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಿಂದ ಕುದ್ರೋಳಿ ದೇವಸ್ಥಾನದವರೆಗೆ ನಡೆದ ‘ನಮ್ಮ ನಡಿಗೆ ಬ್ರಹ್ಮಶ್ರೀ ನಾರಾಯಣ ಗುರು ಕಡೆಗೆ’ ಕಾಲ್ನಡಿಗೆ ಜಾಥಾಗೆ ಮಾಜಿ ಉಪಮುಖ್ಯಮಂತ್ರಿ, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಮಾತನಾಡಿ, ನಾರಾಯಣ ಗುರುಗಳು ಮಾನವತೆಯ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾ ಮಾನವತಾವಾದಿ. ಅವರ ತತ್ವ ಆದರ್ಶಗಳು ಸಮಾಜದಲ್ಲಿ ಅಮೂಲಾಗ್ರ ಬದಲಾವಣೆ ತಂದಿದೆ. ಕೇಂದ್ರ ಸರಕಾರದ ಈ ನಿಲುವು ನಾರಾಯಣ ಗುರುಗಳನ್ನು ಹಾಗೂ ಅವರ ಚಿಂತನೆಗಳನ್ನು ಅಪಮಾನಿಸಿದೆ. ಕೇಂದ್ರ ಸರಕಾರ ಕೂಡಲೇ ಕ್ಷಮೆ ಕೇಳಬೇಕು, ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಈ ಸಂದರ್ಭ ಎಐಸಿಸಿ ಕಾರ್ಯದರ್ಶಿಗಳಾದ ಐವನ್ ಡಿಸೋಜಾ, ಪಿವಿ ಮೋಹನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಜೆ.ಆರ್. ಲೋಬೋ, ಮುಖಂಡರುಗಳಾದ ಶಾಹುಲ್ ಹಮೀದ್, ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್ ಬಜಾಲ್, ಎನ್.ಎಸ್. ಕರೀಂ, ಆಶೀತ್ ಪಿರೇರಾ, ಮೊಹಮ್ಮದ್ ಶಮೀರ್ ಸುರತ್ಕಲ್, ಸಿ.ಎಂ.ಮುಸ್ತಫಾ, ಸಜಿತ್ ಶೆಟ್ಟಿ, ಬೆಳ್ಳಿಪ್ಪಾಡಿ ಅಭಿಷೇಕ್ ರಘು, ರಮಾನಂದ ಪೂಜಾರಿ, ನವೀದ್ ಅಖ್ತರ್, ಪ್ರಸಾದ್ ಗಾಣಿಗ, ಫೈಝಲ್ ಕಡಬ, ಅನಿಲ್ ಪೈ, ನವೀನ್ ಕುಮಾರ್, ಮೊಹಮ್ಮದ್ ಇರ್ಷಾದ್, ಅಶ್ವಥ್ ರಾಜ್, ಮೊಹಮ್ಮದ್ ಇರ್ಷಾದ್, ಹಸನ್ ಫಳ್ನೀರ್, ಫಯಾಝ್ ಅಮ್ಮೆಮ್ಮಾರ್, ಬಿ.ಎಸ್. ಇಸ್ಮಾಯೀಲ್, ಸಂಜನಾ ಛಲವಾದಿ, ಸೌಹಾನ್ ಎಸ್.ಕೆ, ಪವನ್ ಸಾಲ್ಯಾನ್, ಹಬೀಬ್ ಕಣ್ಣೂರು ಮೊದಲಾದವರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...