ಬ್ರಹ್ಮಾವರ : ಕಂಟೈನರ್ ಢಿಕ್ಕಿ, ಪಾದಚಾರಿ ಸಾವು

Source: S.O. News Service | By MV Bhatkal | Published on 1st March 2021, 7:24 PM | Coastal News | Don't Miss |

 

ಬ್ರಹ್ಮಾವರ : ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಸಾವನ್ನಪ್ಪಿರುವ ಘಟನ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಲುವಳ್ಳಿಯಲ್ಲಿ ನಡೆದಿದೆ.

ಕೃಷ್ಣ ಮರಕಾಲ (60 ವರ್ಷ) ಎಂಬವರೇ ಸಾವನ್ನಪ್ಪಿದ ದುರ್ದೈವಿ. ಬ್ರಹ್ಮಾವರದಿಂದ ಹೆಬ್ರಿಯ ಕಡೆಗೆ ಚಲಿಸುತ್ತಿದ್ದ ಕಂಟೈನರ್ ಲಾರಿ ಚಲಿಸುತ್ತಿತ್ತು. ಚಾಲಕ ಅತೀ ವೇಗ ಹಾಗೂ ಅಜಾಗರೂಕತೆ ಯಿಂದ ಕಂಟೈನರ್ ಚಲಾಯಿಸುತ್ತಿದ್ದು, ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೃಷ್ಣ ಮರಕಾಲರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕೃಷ್ಣ ಮರಕಾಲ ಅವರು ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದ್ರೂ, ಅವರು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ತೀವ್ರತೆಗೆ ಕಂಟೈನರ್ ಲಾರಿ ಪಲ್ಟಿಯಾಗಿ ಪಕ್ಕದಲ್ಲಿರುವ ಗದ್ದೆಗೆ ಉರುಳಿ ಬಿದ್ದಿದೆ. ಲಾರಿ ಚಾಲಕ ಅಬೂಬಕ್ಕರ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...