ಮಂಗಳೂರು ಕಾವೂರು ಬಳಿ ಸೇತುವೆ ಬಿರುಕು. ಬಜ್ಪೆ ವಿಮಾನ ನಿಲ್ದಾಣ ಸಂಪರ್ಕ ಕಡಿತ.

Source: SO News | By Laxmi Tanaya | Published on 15th June 2021, 10:47 PM | Coastal News |

ಮಂಗಳೂರು : ಮಂಗಳೂರು ಏರ್ ಪೋರ್ಟ್ ಗೆ ತೆರಳುವ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದೆ. ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.‌ 

ಸೋಮವಾರ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ. ಬಜ್ಪೆ ಏರ್ಪೋರ್ಟ್‌ಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.
ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ. ಇಲ್ಲಿ ಹೊಸ ಸೇತುವೆ ಕಾಮಗಾರಿ ನಡಿತಿದ್ದು ಹೀಗಾಗಿ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಸೇತುವೆ ಒಂದು ಭಾಗದ ಪಿಲ್ಲರ್ ಕುಸಿದು ಸೇತುವೆ ಬಿರುಕು ಬಿಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ನಗರದ ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...