ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ಕರೆತನ್ನಿ : ಡಾ|| ಸೆಲ್ವಮಣಿ

Source: SO News | By Laxmi Tanaya | Published on 13th January 2022, 9:50 PM | State News | Don't Miss |

ಶಿವಮೊಗ್ಗ : ಲಿಂಗತ್ವ ಅಲ್ಪಸಂಖ್ಯಾತರಿಗೆ ಅಗತ್ಯವಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಸಮಾಜದ ಮುಖ್ಯವಾಹಿನಿಗೆ ಕರೆತರುವ ಅಗತ್ಯವಿದೆ ಎಂದು ನೂತನ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು.

 ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃಧ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಕ್ಷಾ ಸಮುದಾಯ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು-ಸಮಾಜದ ಮುಖ್ಯವಾಹಿನಿಯೆಡೆಗೆ ಎಂಬ ವಿಷಯದ ಕುರಿತು ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

 ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್‍ವಸತಿ ಸೇರಿದಂತೆ ಹಲವು ಕಾರ್ಯಕ್ರಮಗಳ ಅರಿವು ಮೂಡಿಸಬೇಕು. ಅಲ್ಲದೇ ಇತರರಂತೆ ಬದುಕು ನಡೆಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಇವರು ತಮ್ಮ ನೆಮ್ಮದಿಯ ಬದುಕಿಗೆ ಉದ್ಯೋಗಾವಕಾಶ, ಸಾಲ-ಸೌಲಭ್ಯ, ಇತರೆ ಆರ್ಥಿಕ ನೆರವು ಸೇರಿದಂತೆ ಸರ್ಕಾರದ ಯಾವುದೇ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದವರು ನುಡಿದರು.

 ಲಿಂಗತ್ವ ಅಲ್ಪಸಂಖ್ಯಾತರಿಗೆ ಬ್ಯಾಂಕ್‍ಖಾತೆ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ದೊರೆಯುವಂತೆ ನೋಡಿಕೊಳ್ಳಬೇಕು. ಅಲ್ಲದೇ ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಲಿಂಗತ್ವ ಅಲ್ಪಸಂಖ್ಯಾತರೂ ಸಹ ತಮಗೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

 ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದ ಅವರು, ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಸ್ವಾವಲಂಬನೆಯ ಬದುಕಿಗೆ ದಾರಿ ಕಂಡುಕೊಳ್ಳಬೇಕು. ಸಮಾಜದಲ್ಲಿ ಎಲ್ಲರಂತೆ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದವರು ನುಡಿದರು.

 ಲಿಂಗತ್ವ ಅಲ್ಪಸಂಖ್ಯಾತರಿಗೆ ಆರ್ಥಿಕ ನೆರವು, ಸಾಮಾಜಿಕ ಭದ್ರತೆ ಹಾಗೂ ಅವರ ಸರ್ವಾಂಗೀಣ ವಿಕಾಸಕ್ಕೆ ಸಂಬಂಧಿಸಿದಂತೆ ಮುಂದಿನ 15ದಿನಗಳಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ವಿಶೇಷ ಸಭೆ ಕರೆದು ಸಮಾಲೋಚನೆ ನಡೆಸುವುದಾಗಿ ಅವರು ತಿಳಿಸಿದರು.

 ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಡಿವೈಎಸ್ಪಿ ಪ್ರಶಾಂತ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಕೋಶದ ಅಧ್ಯಕ್ಷ ಸುರೇಶ್ ಅಂಗಡಿ, ರಕ್ಷಾ ಸಮುದಾಯ ಸಂಘದ ಅಧ್ಯಕ್ಷ ಪ್ಯಾರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

 ಸಭೆಯ ನಂತರ ಆಹ್ವಾನಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಇಲಾಖೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರರಿಗಾಗಿ ಅನುಷ್ಠಾನದಲ್ಲಿರುವ ಹಲವು ಯೋಜನೆಗಳ ಯೋಜನಾಧಿಕಾರಿಗಳು ಉಪಸ್ಥಿತರಿದ್ದು, ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ನೂರಾರು ಸಂಖ್ಯೆಯ ಲಿಂಗತ್ವ ಅಲ್ಪಸಂಖ್ಯಾತರು ಭಾಗವಹಿಸಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...