ಗೋಗಲ್ ಸರ್ಚ್‍ನ ಭಟ್ಕಳಕ್ಕೂ ವಾಸ್ತವ ಭಟ್ಕಳಕ್ಕೂ ಅಜಗಜಾಂತರ ವ್ಯತ್ಯಾಸವಿದೆ-ಬ್ರಿಟೀಷ್ ರಾಯಭಾರಿ ಡೊಮ್ಯಾನಿಕ್ ಮ್ಯಾಕ್ ಅಲಿಷ್ಟರ್

Source: sonews | By Staff Correspondent | Published on 29th January 2019, 7:24 PM | Coastal News | State News | National News | Don't Miss |

ಭಟ್ಕಳ: ಭಟ್ಕಳವನ್ನು ಗೋಗಲ್ ಸರ್ಚ್‍ನಲ್ಲಿ ನೋಡಿದರೆ ಅದರ ಚಿತ್ರಣವೇ ಬೇರೆಯಾಗಿದ್ದು ವಾಸ್ತವ ಭಟ್ಕಳಕ್ಕೂ ಗೋಗಲ್ ಸರ್ಚ್‍ನ ಮಾಧ್ಯಮಗಳ ಭಟ್ಕಳಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಬ್ರಿಟೀಷ್ ದೇಶದ ರಾಯಭಾರಿ (British deputy high commissioner) ಡೊಮ್ಯಾನಿಕ್ ಮ್ಯಾಕ್ ಅಲಿಷ್ಟರ್ ಹೇಳಿದರು.

ಅವರು ಮಂಗಳವಾರ ಭಟ್ಕಳದ ಅಬುಲ್ ಹಸನ್ ಅಲಿ ನದ್ವಿ ಇಸ್ಲಾಮಿಕ್ ಅಕಾಡೆಮಿಯ ಅಹ್ವಾನದ ಮೆರೆಗೆ ಭಟ್ಕಳದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಹುಬ್ಬಳ್ಳಿಯಿಂದ ಶಿರಸಿ ಮಾರ್ಗವಾಗಿ ಭಟ್ಕಳ ಬಂದ ಅವರು ಇಲ್ಲಿನ ಅಬುಲ್ ಹಸನ್ ಅಲಿ ನದ್ವಿ ಇಸ್ಲಾಮಿ ಅಕಾಡೆಮಿಗೆ ಭೇಟಿ ಅಕಾಡೆಮಿಯಿಂದ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು. ದೇಶದ ಹಿಂದೂ ಮುಸ್ಲಿಮರಲ್ಲಿ ಸಹೋದರತೆಯ ಭಾವನೆ ಮೂಡಿಸುವಲ್ಲಿ ಅಕಾಡೆಮಿ ಶ್ರಮಿಸುತ್ತಿದ್ದು ಪರಸ್ಪರ ಸಮುದಾಯಗಳಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಲು ಇದು ಸಹಕಾರಿಯಾಗಿದೆ ಎಂದರು. ಮಾಧ್ಯಮಗಳು ಭಟ್ಕಳವನ್ನು ಅತ್ಯಂತ ಕೆಟ್ಟದ್ದಾಗಿ ಚಿತ್ರಿಸಿವೆ. ವಾಸ್ತವದಲ್ಲಿ ಭಟ್ಕಳ ಬಹಳ ಸುಂದರವಾಗಿದೆ ಎಂದು ಭಟ್ಕಳ ಹಾಗೂ ಭಟ್ಕಳದ ಜನತೆಯನ್ನು ಪ್ರಶಂಸಿದರು.

ನಂತರ ಅಲಿಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿದ ಅವರು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿದರು. ಜಾಮಿಯಾ ಇಸ್ಲಾಮಿಯ ಶಿಕ್ಷಣ ಸಂಸ್ಥೆ ಹಾಗೂ ಅಂಜುಮನ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ ಅವರು ಭಟ್ಕಳದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕೆಲಸವಾಗುತ್ತಿದೆ. ಸಮುದಯಾದ ಅಭಿವೃದ್ಧಿಗಾಗಿ ಬ್ರಿಟೀಷ್ ದೇಶದಿಂದ ಏನೆಲ್ಲ ಸಹಾಯ, ಸಹಕಾರ ನೀಡಲು ಸಾಧ್ಯವಾಗುತ್ತದೋ ಅದನ್ನು ತಾನು ನೀಡುವುದಾಗಿ ಈ ಸಂದರ್ಭದಲ್ಲಿ ಅವರು ತಿಳಿಸಿದರು. 

ಅಂಜುಮನ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಮುಖಂಡರೊಂದಿಗೆ ಮಾತನಾಡಿದ ಅವರು ತಾಂತ್ರಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಬ್ರಿಟನ್ ನಲ್ಲಿ ವಿವಿಧ ಕಂಪನಿಗಳಲ್ಲಿ ಯಾವ ರೀತಿಯ ಸಹಕಾರ ನೀಡಲಾಗುವುದು ಎಂಬುದರ ಕುರಿತಂತೆ ಚರ್ಚಿಸಿದರು. ಅಲ್ಲದೆ ಸಂಸ್ಥೆಯ ಮುಖ್ಯಸ್ಥರಿಗೆ ಬೆಂಗಳೂರಿನ ಬ್ರಿಟನ್ ರಾಯಭಾರಿ ಕಚೇರಿಗೆ ಭೇಟಿ ನೀಡುವಂತೆ ಆಹ್ವಾನಿಸಿದರು. 

ಈ ಸಂದರ್ಭದಲ್ಲಿ ಅಲಿ ಪಬ್ಲಿಕ್ ಸ್ಕೂಲ್ ಹಾಗೂ ಅಲಿಮಿಯಾ ನದ್ವಿ ಇಸ್ಲಾಮಿಕ್ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಮೌಲಾನ ಮುಹಮ್ಮದ್ ಇಲ್ಯಾಸ್ ನದ್ವಿ, ಅಂಜುಮನ್ ಸಂಸ್ಥಯ ಕಾರ್ಯದರ್ಶಿ ಮುಹಮ್ಮದ್ ಮೊಹಸಿನ್ ಶಾಬಂದ್ರಿ, ರಾಯಭಾರಿಯವರ ಆಪ್ತ ಸಹಾಯಕ ನಟರಾಜ್, ರಾಜಕೀಯ ಹಾಗೂ ಆರ್ಥಿಕ ಸಲಹೆಗಾರ ಮಂಜುನಾಥ್ ಶ್ರೀಪತಿ ಸೇರಿಂದತೆ ಹಲವು ಮುಖಂಡರು ಉಪಸ್ಥಿತರಿದ್ದರು. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...