ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು ಆಯುಕ್ತ ಅಜಿತ್ ಕುಮಾರ್ ಹೆಗ್ಡೆ

Source: so news | Published on 10th January 2020, 12:07 AM | Coastal News | Don't Miss |


ಮಂಗಳೂರು;ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಟ್ರಾಫಿಕ್‍ಗಳಿಗೆ ತೊಂದರೆ ನೀಡದೆ ಯಾವುದೇ ದೂರು ಬಾರದ ಹಾಗೆ ವ್ಯವಸ್ಥಿತವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು, ಸುವ್ಯವಸ್ಥೆಯನ್ನು  ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ  ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು.
ನಗರದ ಪುರಭವನದಲ್ಲಿ ನಡೆದ  ಮಂಗಳೂರು ಮಹಾನಗರಪಾಲಿಕೆಯ ಬೀದಿ ಬದಿ ವ್ಯಾಪಾರಸ್ಥರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸರಕಾರಿ ಸವಲತ್ತುಗಳ ಅರಿವು ಕಾರ್ಯಕ್ರಮದಲ್ಲಿ ಮಾತಾಡಿದರು.
ಆರೋಗ್ಯ ಎಂಬುದು ಪ್ರತಿಯೊಬ್ಬರಿಗೂ ಅತೀ ಮುಖ್ಯವಾಗಿದ್ದು, ಆರೋಗ್ಯ ಉತ್ತಮವಾಗಿರಲು, ಆರೋಗ್ಯವನ್ನು ಸುಧಾರಿಸಿಕೊಳ್ಳುವ ನಿಟ್ಟಿನಲ್ಲಿ   ಸರ್ಕಾರ  ಬೀದಿ ಬದಿ ದುಡಿಯುವ ಕಾರ್ಮಿಕ/ ವ್ಯಾಪಾರಸ್ಥರಿಗೆ  ಹಲವು ಯೋಜನೆಗಳನ್ನು ನೀಡುತ್ತಿದೆ. ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಮಾಜದಲ್ಲಿ ನಮ್ಮ ಸುತ್ತಮುತ್ತ ಬಡತನ ಇರುವಾಗ, ಅವರ ಹಸಿವಿನ ನೋವು ನೋಡುವಾಗ  ನಮಗೆ ಪಾಪಪ್ರಜ್ಞೆ ಕಾಡುತ್ತದೆ. ಸಮಾಜದಲ್ಲಿನ  ಬಡತನ ನಿರ್ಮೂಲನೆಯಾಬೇಕು, ಸಮಾನತೆಯಿಂದ ಬದುಕಬೇಕು, ಮುಂದಿನ ದಿನಗಳಲ್ಲಿ ಮಹಾನಗರಪಾಲಿಕೆಯಿಂದ ಬೀದಿ ಬದಿ ವ್ಯಾಪಾರಸ್ಥರಿಗೆ  ಇಂತಹ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ವ್ಯಾಪ್ತಿಯ ಬೀದಿ ಬದಿ ವ್ಯಾಪಾರಸ್ಥರ ಸಂಘದಲ್ಲಿ ಯಾವುದೇ ಚುಣಾವಣೆ ನಡೆಯದೆ ಅವಿರೋಧ ಆಯ್ಕೆ ಮಾಡಲಾಗಿದ್ದು, ಈ ಕಾರಣಕ್ಕೆ ಬೀದಿ ಬದಿ ವ್ಯಾಪಾರಸ್ಥರ ಸಂಘಕ್ಕೆ ಆಯುಕ್ತರು ಅಭಿನಂದನೆಯನ್ನು ತಿಳಿಸಿದರು.
ರಾಜ್ಯದಲ್ಲಿ ಮೊದಲ ಬಾರಿಗೆ ದ.ಕ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಮಾರಾಟ ಪ್ರಮಾಣ ಪತ್ರಗಳನ್ನು ಮಾಡಲಾಗಿದ್ದು, ಒಟ್ಟು 308 ಪ್ರಮಾಣ ಪತ್ರಗಳಲ್ಲಿ ಕೆಲವು ಪ್ರಮಾಣ ಪತ್ರ ಹಾಗೂ   ವ್ಯಾಪಾರಸ್ಥರ ಗುರುತಿನ ಚೀಟಿಯನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಉಪ ಆಯುಕ್ತ ಸಂತೋಷ್ ಕುಮಾರ್, ಜಿಲ್ಲಾ ಕಾರ್ಮಿಕ ಇಲಾಖೆ ಕಾರ್ಮಿಕ ಅಧಿಕಾರಿ ವಿಲ್ಮಾ, ಕೆ.ಎಂ.ಸಿ ಉಪ ವೈದ್ಯಕೀಯ ಅಧೀಕ್ಷಕ ದೀಪಕ್ ಪಡಿ, ಕೇಂದ್ರ ಕಾರ್ಮಿಕ ಇಲಾಖೆ ಇಎಸ್‍ಐ ವೈದ್ಯಾಧಿಕಾರಿ ಡಾ. ಭಾಗ್ಯಲಕ್ಷ್ಮೀ, ಜಿಲ್ಲಾ ಟಿಬಿ ಅಧಿಕಾರಿ ಡಾ, ಬದ್ರುದ್ದೀನ್,  ಜಿಲ್ಲಾ ಆಯುಷ್ಮಾನ್ ಭಾರತ್ ನೋಡಲ್ ಅಧಿಕಾರಿ ಡಾ.ರತ್ನಾಕರ್, ಡಾ. ನವೀನ್,  ಜಿಲ್ಲಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮಹಮ್ಮದ್ ಮುಸ್ತಫಾ ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...